Publish Date: Wed, 18 May 2022 (19:53 IST)
Updated Date: Wed, 18 May 2022 (19:56 IST)
ಉಪ್ಪಿನ ಕಾರ್ಖಾನೆಯ ಗೋಡೆ ಕುಸಿದ ಪರಿಣಾಮ 12 ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ಗುಜರಾತ್ ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ.
ಮೋರ್ಬಿ ಜಿಲ್ಲೆಯ ಹಲ್ವದ್ ಪಟ್ಟಣದಲ್ಲಿಂದು 12 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ ಇದೆ.
ದುರ್ಘಟನೆ ಕುರಿತು ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದು, ಮೃತ ಕುಟುಂಬಗಳಿಗೆ ತಲಾ ೨ ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.