Publish Date: Mon, 28 Oct 2019 (18:40 IST)
Updated Date: Mon, 28 Oct 2019 (18:42 IST)
ಹಾಸ್ಟೇಲ್ ವಾರ್ಡನ್ ನಿಂದ ಥಳಿತಕ್ಕೊಳಗಾಗಿದ್ದ ವಿದ್ಯಾರ್ಥಿ ಸಾವು ಬದುಕಿನ ನಡುವೆ ಹೋರಾಡಿ ಸಾವನ್ನಪ್ಪಿದ್ದಾನೆ.
ವಿದ್ಯಾರ್ಥಿ ವಿಜಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಹುಬ್ಬಳ್ಳಿ ನೇಕಾರನಗರ ನಿವಾಸಿ ವಿಜಯ ಮೃತ್ಯುಂಜಯ ಹಿರೇಮಠ ಮೃತಪಟ್ಟ ಬಾಲಕನಾಗಿದ್ದು, ಇತ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಛಾತ್ರಾ ಖಾಸಗಿ ಹಾಸ್ಟೆಲ್ ನಲ್ಲಿ ಇದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದನು. ಆದರೆ ಕಳೆದ ತಿಂಗಳು ಈತ ಹಾಸಿಗೆಯಲ್ಲಿ ಮೂತ್ರ ವಿಸರ್ಜನೆ ಮಾಡಿಕೊಂಡ ಎಂಬ ಕಾರಣಕ್ಕೆ ಹಾಸ್ಟೆಲ್ ವಾರ್ಡನ್ ಶ್ರವಣಕುಮಾರ ಎಂಬಾತ ವಿಜಯ ಮೇಲೆ ಮನಬಂದಂತೆ ಥಳಿಸಿದ್ದನು. ಪರಿಣಾಮ ವಿಜಯನ ಹೊಟ್ಟೆ ಸೇರಿದಂತೆ ಮತ್ತಿತರ ಕಡೆ ಗಂಭೀರವಾಗಿ ಗಾಯಗೊಂಡಿದ್ದನು.
ಗಾಯಗೊಂಡ ವಿಜಯನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ, ಮೊದಲು ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ವಿಜಯನಿಗೆ ಇನ್ನೂ ಹೆಚ್ಚಿನ ಚಿಕಿತ್ಸೆ ಬೇಕಾದ ಹಿನ್ನಲೆಯಲ್ಲಿ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬಾಲಕನ ಸ್ಥಿತಿ ಗಂಭೀರವಾಗಿದ್ದರಿಂದ ಮೃತಪಟ್ಟಿದ್ದಾನೆ.
ಈ ಕುರಿತು ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.