Publish Date: Sun, 23 Dec 2018 (15:47 IST)
Updated Date: Sun, 23 Dec 2018 (15:49 IST)
ಕರ್ತವ್ಯನಿರತ ಯೋಧನೊಬ್ಬ ಅಪಘಾತವೊಂದರಲ್ಲಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿರುವ ಘಟನೆ ನಡೆದಿದೆ.
ಯೋಧನ ಪಾರ್ಥಿವ ಶರೀರ ಹುಟ್ಟೂರಾದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಯಿಂಗ್ಲಜ್ ಗ್ರಾಮಕ್ಕೆ ಆಗಮಿಸಿತು.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಯಿಂಗ್ಲಜ ಗ್ರಾಮದ ಹುತಾತ್ಮ ಯೋಧ ಸಾಗರ ಸುರೇಶ ಮಗದುಮ್ಮ(36) ಹುತಾತ್ಮರಾಗಿದ್ದಾರೆ.
ರಾಜಸ್ಥಾನದಲ್ಲಿ ನಡೆದ ಅಪಘಾತದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದರು.
ಯೋಧನ ಪ್ರಾರ್ಥಿವ ಶರೀರ ಅಂತಿಮ ದರ್ಶನಕ್ಕೆ ಗ್ರಾಮದಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಗ್ರಾಮದಲ್ಲಿ ಯೋಧನ ಪಾರ್ಥಿವ ಶರೀರ ಮೆರವಣಿಗೆ ನಡೆಸಿ ನಂತರ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುವದು ಎಂದು ಜಿಲ್ಲಾಡಳಿತ ಹಾಗೂ ಯೋಧನ ಕುಟುಂಬ ವರ್ಗದ ಮೂಲಗಳು ತಿಳಿಸಿವೆ.