ಕ್ವಾರಂಟೈನ್ ಉಲ್ಲಂಘನೆ ತಡೆಗೆ ವಾಚ್ ಆ್ಯಪ್

Webdunia
ಬುಧವಾರ, 24 ಜೂನ್ 2020 (19:34 IST)
ಹೊರಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಬಂದವರಿಂದ ಕೋವಿಡ್ ಪ್ರಕರಣಗಳು ಹೆಚ್ಚಿದ್ದು, ಇದರ ನಿಯಂತ್ರಣಕ್ಕಾಗಿ ವಾಚ್ ಆ್ಯಪ್ ಮೊರೆ ಹೋಗಲಾಗಿದೆ.

ತುಮಕೂರು ಜಿಲ್ಲೆಯಲ್ಲಿ ಇದುವರೆಗೆ 15,440 ಮಂದಿಯ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದ್ದು, ಇದರಲ್ಲಿ 57 ಮಂದಿಗೆ ಕೋವಿಡ್ ದೃಢಪಟ್ಟಿದೆ ಎಂದು ಡಿಸಿ ರಾಕೇಶ್ ಕುಮಾರ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಜ್ವರ, ಶೀತ, ಕೆಮ್ಮು ಲಕ್ಷಣಗಳಿರುವವರಿಂದ ಗಂಟಲು ದ್ರವದ ಮಾದರಿ ಸಂಗ್ರಹಿಸಲು ಕ್ರಮ ವಹಿಸಲಾಗಿದ್ದು, ಕೋವಿಡ್ ಪ್ರಕರಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಕೋವಿಡ್ ತಪಾಸಣಾ ಕೇಂದ್ರವನ್ನು ತಾಲ್ಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗುತ್ತಿದೆ. ಇದರೊಂದಿಗೆ ಕೋವಿಡ್ ಕೇರ್ ಸೆಂಟರ್ ಗಳನ್ನು ಸ್ಥಾಪಿಸಲಾಗುವುದು ಎಂದರು.

ಕ್ವಾರಂಟೈನ್ ವಾಚ್ ಆ್ಯಪ್ ಮೂಲಕ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ನಿಗಾ ವಹಿಸಲಾಗಿದ್ದು, ಈಗಾಗಲೇ 25 ಪ್ರಕರಣಗಳನ್ನು ದಾಖಲಿಸಲಾಗಿದೆ. ಅಕ್ಕ ಪಕ್ಕದ ಮನೆಯವರಿಗೆ ನೋಟೀಸ್ ನೀಡಲಾಗುವುದು, ಕ್ವಾರಂಟೈನ್ ನಲ್ಲಿರುವವರು ನಿಯಮಗಳನ್ನು ಉಲ್ಲಂಘಿಸುತ್ತಿದ್ದರೆ ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಆಡಳಿತಕ್ಕೆ ಮಾಹಿತಿ ನೀಡಬೇಕು ಎಂದಿದ್ದಾರೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಷ್ಟದಲ್ಲಿದ್ದಾಗ ಒಬ್ಬರಿಗೆ ಸಹಾಯ ಮಾಡಲು ಹಿಂದೂ ಮುಂದು ನೋಡಬೇಕೆನಿಸುತ್ತದೆ, ಈ ವಿಡಿಯೋ ನೋಡಿ

ಎಸ್ ಐಆರ್ ವಿಚಾರದಲ್ಲಿ ಆರೋಪ ಆತಂಕ ಪಡುವುದು ಏನೂ ಇಲ್ಲ

ಕರ್ನಾಟಕ ಮುಂಗಾರು ಜೋರು, ನಾಲೆ 6ಜಿಲ್ಲೆಗೆ ರೆಡ್ ಅಲರ್ಟ್‌

ವಯನಾಡು ಭೂಕುಸಿತದಲ್ಲಿ ಟ್ಯಾಂಕರ್ ಹೇಗೆ ಕೊಚ್ಚಿ ಹೋಯಿತು ನೋಡಿ, ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments