Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಆರ್.ಅಶೋಕ್

Sampriya
ಭಾನುವಾರ, 17 ಮಾರ್ಚ್ 2024 (15:51 IST)
ಬೆಂಗಳೂರು: ನಗರದಲ್ಲಿ ಉಲ್ಭಣಗೊಂಡಿರುವ ನೀರಿನ ಸಮಸ್ಯೆ ಬಗ್ಗೆ ಕಾಂಗ್ರೆಸ್ ಸರ್ಕಾರ ಸೂಕ್ತ ಪರಿಹಾರವನ್ನು ಕೈಗೊಳ್ಳದೆ ಬೇಜವಾಬ್ದಾರಿಯನ್ನು ತೋರುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 
ಈ ಸಂಬಂಧ ಎಕ್ಸ್‌ ಖಾತೆಯಲ್ಲಿ ಆರ್. ಅಶೋಕ್ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. 
 
ನೀರಿನ ಸಮಸ್ಯೆ ಕುರಿತಂತೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮಧ್ಯಾಹ್ನ ಸಂಬಂಧಪಟ್ಟವರ ಸಭೆ ಕರೆದಿದ್ದಾರೆ.  ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿ, ಟಾರ್ಗೆಟ್ ಹಾಗೂ ಕಾಲಮಿತಿ ನಿಗದಿ ಮಾಡದಿದ್ದರೂ ಇದೂ ಕೂಡ  ಮತ್ತೊಂದು ಕಾಟಾಚಾರದ ಸಭೆ ಆಗುವುದರಲ್ಲಿ ಸಂದೇಹವಿಲ್ಲ ಎಂದಿದ್ದಾರೆ. 
 
ಆರ್.ಅಶೋಕ್ ಫೋಸ್ಟ್‌ ಮಾಡಿದ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ. 
 
Photo Courtesy Facebook
ಬೆಂಗಳೂರಿನ ನೀರಿನ ಸಮಸ್ಯೆ ಕುರಿತಂತೆ ಚರ್ಚಿಸಲು ಮುಖ್ಯಮಂತ್ರಿ ಶ್ರೀ @Siddaramaiah
 ನವರು ಸೋಮವಾರ ಮಧ್ಯಾಹ್ನ  ಸಂಬಂಧಪಟ್ಟವರ ಸಭೆ ಕರೆದಿದ್ದಾರೆ. 
 
ಬರಗಾಲವಿದೆ ಅಂತ ಗೊತ್ತಿದ್ದರೂ ಕಳೆದ ಆರೇಳು ತಿಂಗಳಿಂದ ಯಾವುದೇ ಮುಂಜಾಗ್ರತೆ ವಹಿಸದೆ, ಪೂರ್ವಸಿದ್ಧತೆ ಮಾಡಿಕೊಳ್ಳದೆ, ಪರ್ಯಾಯ ಮಾರ್ಗಗಳನ್ನು ಹುಡುಕದೆ ಕಾಲಹರಣ ಮಾಡಿದ @INCKarnataka
 ಸರ್ಕಾರದ ಬೇಜವಾಬ್ದಾರಿ, ನಿರ್ಲಕ್ಷ್ಯ ಧೋರಣೆಯೇ ಇಂದಿನ ಸಮಸ್ಯೆಗೆ ಕಾರಣ.
 
ನಾಳೆ ಕರೆದಿರುವ ಸಭೆಯೂ ಸಹ ಕೇವಲ ಕಾಟಾಚಾರಕ್ಕೆ ನಡೆಯುವ ಮತ್ತೊಂದು ನಾಮಕಾವಸ್ತೆ ಸಭೆ ಆಗದಿರಲಿ ಎನ್ನುವ ಉದ್ದೇಶದಿಂದ ಸರ್ಕಾರಕ್ಕೆ ಕೆಲವು ಸಲಹೆಗಳನ್ನು ನೀಡುತ್ತಿದ್ದೇನೆ.
 
1.) ಟ್ಯಾಂಕರ್ ಗಳ ನೋಂದಣಿಗೆ ನೀಡಲಾಗಿದ್ದು ಗಡುವು ಮುಕ್ತಾಯವಾಗಿ ಎರಡು ದಿನಗಳು ಕಳೆದಿದ್ದರೂ, ಇನ್ನೂ ಟ್ಯಾಂಕರ್ ಗಳ ನೋಂದಣಿ ಪೂರ್ತಿಯಾಗಿಲ್ಲ. ಬೆಂಗಳೂರಲ್ಲಿ 3,500ಕ್ಕೂ ಹೆಚ್ಚು ಖಾಸಗಿ ಟ್ಯಾಂಕರ್ ಗಳಿವೆ. ಆದರೆ ನೋಂದಣಿ ಆಗಿರುವುದು ಕೇವಲ 1,700 ಮಾತ್ರ. ಅಂದರೆ ಶೇ.50%ಕ್ಕೂ ಹೆಚ್ಚು ಟ್ಯಾಂಕರ್ ಗಳು ಇನ್ನೂ ನೋಂದಣಿ ಆಗಿಲ್ಲ. ಟ್ಯಾಂಕರ್ ಮಾಫಿಯಾ, ಸುಲಿಗೆಗೆ ಕಡಿವಾಣ ಹಾಕಬೇಕಾದರೆ ಕಡ್ಡಾಯವಾಗಿ ಯಾವುದೇ ಮುಲಾಜಿಲ್ಲದೆ ಎಲ್ಲಾ ಟ್ಯಾಂಕರ್ ಗಳ ನೋಂದಣಿ ಮಾಡಿಸಬೇಕು.
 
2.) ಜಲಮಂಡಳಿ ವತಿಯಿಂದ ಉಚಿತವಾಗಿ ನೀರು ಸರಬರಾಜು ಮಾಡುವ ಟ್ಯಾಂಕರ್ ಗಳ ಮೇಲೆ ಸ್ಟಿಕ್ಕರ್ ಅಂಟಿಸುವುದು ಕಡ್ಡಾಯ ಎಂಬ ನಿಯಮ ಇದ್ದರೂ ಇನ್ನೂ ಹಲವಾರು ಕಡೆ ಸ್ಟಿಕ್ಕರ್ ಅಂಟಿಸಿಲ್ಲ. ಸ್ಟಿಕ್ಕರ್ ಇಲ್ಲದಿದ್ದರೆ ನೀರಿನ ದುರ್ಬಳಕೆ ಆಗುವ ಸಾಧ್ಯತೆ ಇದ್ದು, ಅಧಿಕಾರಿಗಳು ಕಡ್ಡಾಯವಾಗಿ ಸ್ಟಿಕ್ಕರ್ ಅಳವಡಿಸಲು ಕ್ರಮ ಕೈಗೊಳ್ಳಬೇಕು.
 
3.) ನೋಂದಣಿಗೊಂಡಿರುವ ಖಾಸಗಿ ಟ್ಯಾಂಕರ್ ಗಳಿಗೆ ವಿಶೇಷ ಸಂಖ್ಯೆ ನೀಡಿ, ಗುರುತಿನ ಚೀಟಿ ಅಂಟಿಸಬೇಕು. ಜಿಲ್ಲಾಡಳಿತ ನೀಡಿರುವ ದರ ಪಟ್ಟಿ ಹಾಗೂ ದೂರು ಸಂಖ್ಯೆಯನ್ನು ಟ್ಯಾಂಕರ್ ಗಳ ಮೇಲೆ ಕಡ್ಡಾಯವಾಗಿ ನಮೂದಿಸಬೇಕು. 
 
4.) ಅಕ್ರಮ ತಡೆಯಲು ಟ್ಯಾಂಕರ್ ಗಳಿಗೆ ಜಿಪಿಎಸ್ ಟ್ರಾಕರ್ ಅಳವಡಿಸಬೇಕು. ಜನಸಾಂದ್ರತೆ ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ಟ್ಯಾಂಕರ್ ವ್ಯವಸ್ಥೆ ಮಾಡಬೇಕು.
 
5.) ಸಾರ್ವಜನಿಕರಿಗೆ ನೀಡಿರುವ ಜಲಮಂಡಳಿ/ ಬಿಬಿಎಂಪಿ ಸಹಾಯವಾಣಿ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳಿದ್ದು, ಖಾಸಗಿ ಕಾಲ್ ಸೆಂಟರ್ ತೆರೆಯುವ ಮೂಲಕ ಜಲಮಂಡಳಿ ಸಹಾಯವಾಣಿಯನ್ನು ಜನಸ್ನೇಹಿ ಮಾಡಲು ಕ್ರಮಕೈಗೊಳ್ಳಬೇಕು.
 
6.) ಕೇವಲ ಬೆಂಗಳೂರಿನ ಹೃದಯ ಭಾಗ ಮತ್ತು ಪ್ರತಿಷ್ಠಿತ ಬಡಾವಣೆಗಳಲ್ಲಿ ಮಾತ್ರವಲ್ಲದೆ ಬಿಬಿಎಂಪಿ ಹೊರವಲಯ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿನ 110 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸುವ ಬಗ್ಗೆ ಕೂಡ ವಿಶೇಷ ಗಮನ ಹರಿಸಬೇಕು.
 
ಸರ್ಕಾರ ಸಮರೋಪಾದಿಯಲ್ಲಿ ಈ ಮೇಲಿನ ಕ್ರಮಗಳನ್ನು ಜಾರಿ ಮಾಡಿದರೆ ಮಾತ್ರ ನಾಳಿನ ಸಭೆಯಲ್ಲಿ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿ, ಟಾರ್ಗೆಟ್ ಹಾಗೂ ಕಾಲಮಿತಿ ನಿಗದಿ ಮಾಡಲು ಸಾಧ್ಯ. ಇಲ್ಲವಾದರೆ ಇದು ಮತ್ತೊಂದು ಕಾಟಾಚಾರದ ಸಭೆ ಆಗುವುದರಲ್ಲಿ ಸಂದೇಹವಿಲ್ಲ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments