Select Your Language

Notifications

webdunia
webdunia
webdunia
webdunia

ಮಹಾರಾಷ್ಟ್ರದಿಂದ ರಾಜ್ಯಕ್ಕೆ ನೀರು : ಜಲಸಂಪನ್ಮೂಲ ಸಚಿವರು ಹೇಳೋದೇನು?

ಮಹಾರಾಷ್ಟ್ರದಿಂದ ರಾಜ್ಯಕ್ಕೆ ನೀರು : ಜಲಸಂಪನ್ಮೂಲ ಸಚಿವರು ಹೇಳೋದೇನು?
ಬೆಳಗಾವಿ , ಭಾನುವಾರ, 16 ಆಗಸ್ಟ್ 2020 (23:22 IST)
ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ರಾಜ್ಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.

ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಲಕ್ಷ ಕ್ಯೂಸೆಕ್ ಗೂ ಹೆಚ್ಚಿನ ನೀರು ಹರಿದು ಬರುತ್ತಿದೆ. ಅಷ್ಟೇ ಅಲ್ಲದೇ ಬೆಳಗಾವಿ  ಜಿಲ್ಲೆಯ ಘಟಪ್ರಭಾದ ಹಿಡಕಲ್ ಜಲಾಶಯ ಮತ್ತು ಮಲಪ್ರಭಾದ ನವಿಲುತೀರ್ಥ ಜಲಾಶಯ ತುಂಬಿವೆ.

ಈ ಪರಿಣಾಮ ಹೆಚ್ಚಿನ ನೀರನ್ನು ಹೊರಬಿಡಲಾಗುತ್ತಿದೆ. ಸದ್ಯ ಜಲಾಶಯಗಳ ಒಳ ಹರಿವು ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡುವ ಸಾಧ್ಯತೆ ಇದೆ.

ನದಿ ಪಾತ್ರದಲ್ಲಿ ಮತ್ತೆ ಪ್ರವಾಹದ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ‌ಹಾಗಾಗಿ ನದಿ ತೀರದಲ್ಲಿನ ರೈತರು ಹಾಗೂ ಗ್ರಾಮಸ್ಥರು, ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮನವಿ ಮಾಡಿದ್ಧಾರೆ.  

 


Share this Story:

Follow Webdunia kannada

ಮುಂದಿನ ಸುದ್ದಿ

ನಾದಿನಿಗೆ ಭಾವ ನಸುಕಿನ ವೇಳೆ ಮಾಡಿದ್ದೇನು?