Select Your Language

Notifications

webdunia
webdunia
webdunia
webdunia

ಕೆಆರ್‌ಎಸ್‌ ಜಲಾಶಯದಲ್ಲಿ ಭರ್ತಿಯಾಗುತ್ತಿದೆ ನೀರು, ನದಿ ಪಾತ್ರದ ಜನರಿಗೆ ಜಿಲ್ಲಾಡಳಿತ ಮುನ್ಸೂಚನೆ

ಕೆಆರ್‌ಎಸ್‌ ಜಲಾಶಯದಲ್ಲಿ ಭರ್ತಿಯಾಗುತ್ತಿದೆ ನೀರು, ನದಿ ಪಾತ್ರದ ಜನರಿಗೆ ಜಿಲ್ಲಾಡಳಿತ ಮುನ್ಸೂಚನೆ

Sampriya

ಮಂಡ್ಯ , ಶುಕ್ರವಾರ, 19 ಜುಲೈ 2024 (19:24 IST)
Photo Courtesy X
ಮಂಡ್ಯ: ನಿರಂತರ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್‌ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಜಲಾಶಯದಲ್ಲಿ 120 ಅಡಿ ದಾಡಿದ ಕೂಡಲೇ ಸುರಕ್ಷತೆ ದೃಷ್ಟಿಕೋಣದಿಂದ ನೀರನ್ನು ಕಾವೇರಿ ನದಿಗೆ ಹೊರಬಿಡಲಾಗುವುದು. ಈ ನಿಟ್ಟಿನಲ್ಲಿ ನದಿಪಾತ್ರದಲ್ಲಿರುವ ಜನರು ಮುನ್ನೆಚ್ಚರಿಕೆ ವಹಿಸಬೇಕೆಂದು ಡಿಸಿ ಕುಮಾರ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಯಾವ ಕ್ಷಣದಲ್ಲಾದರೂ ಜಲಾಶಯದಿಂದ ಕಾವೇರಿ ನದಿಗೆ ನೀರು ಹರಿಸುವ ಸಾಧ್ಯತೆ ಇದೆ. ಆದ್ದರಿಂದ  ನದಿ ಪಾತ್ರದ ತಗ್ಗು ಪ್ರದೇಶದ ಜನರು ಎಚ್ಚರಿಕೆ ವಹಿಸುವಂತೆ ಕಾವೇರಿ ನೀರಾವರಿ ನಿಗಮದ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನೂ ಕಳೆದ ಕೆಲ ದಿನಗಳಿಂದ  ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಇದೇ ರೀತಿ ಒಳಹರಿವು ಮುಂದುವರಿದರೆ ಶುಕ್ರವಾರ ರಾತ್ರಿ ಅಥವಾ ಶನಿವಾರ ಬೆಳಿಗ್ಗೆ ಅಣೆಕಟ್ಟೆಯಿಂದ ನೀರು ಹೊರಬಿಡುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದಾರೆ.

ಕಂಟ್ರೋಲ್‌ ರೂಂ ಸ್ಥಾಪನೆ: ಮಳೆ ಹಾಗೂ ನದಿಗಳಿಂದ ಯಾವುದೇ ಅಪಾಯಗಳು ಉಂಟಾದಾಗ ಕೂಡಲೇ ಕಂಟ್ರೋಲ್ ರೂಂಗೆ ಮಾಹಿತಿ ಸಲ್ಲಿಸುವುದರಿಂದ ಸಾರ್ವಜನಿಕರನ್ನು ಸಮಸ್ಯೆಯಿಂದ ಪಾರು ಮಾಡಬಹುದು ಎಂದು ತಿಳಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರದೀಪ್ ಈಶ್ವರ್‌ ಕೈಗೆ ಯಾರಾದ್ರೂ ಕಬ್ಬಿಣ ಕೊಡಿ: ಸ್ಪೀಕರ್ ಯುಟಿ ಖಾದರ್