Select Your Language

Notifications

webdunia
webdunia
webdunia
webdunia

ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಅವಾಂತರ

ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಅವಾಂತರ
bangalore , ಬುಧವಾರ, 18 ಮೇ 2022 (19:58 IST)
ಬೆಂಗಳೂರು: ಮಂಗಳವಾರ ಇಡೀ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ನಗರದಲ್ಲಿ ಹಲವು ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.
 
ಇದರಂತೆ ನಗರದ ಕಮಲಾ‌ನಗರ, ನಂದಿನಿ ಬಡಾವಣೆ, ಕಂಠೀರವ ನಗರ ಸೇರಿದಂತೆ ಲೇ ಔಟ್ ನ ತಗ್ಗು ಪ್ರದೇಶದ 200 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ . ಕ್ಷೇತ್ರದ ಶಾಸಕ ಅಬಕಾರಿ ಸಚಿವ ಕೆ.ಗೋಪಾಲಯ್ಯ ಮಧ್ಯರಾತ್ರಿ  ಮನೆ‌ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ತೊಂದರೆಗೆ ಸಿಲುಕಿದವರಿಗೆ ಧೈರ್ಯ ತುಂಬಿರುವುದು ಬೆಳಕಿಗೆ ಬಂದಿದೆ.
 
ಮನೆಯೊಳಗೆ ನೀರು ನುಗ್ಗಿ ಆಹಾರ ಪದಾರ್ಥಗಳು, ಎಲೆಕ್ಟ್ರಾನಿಕ್ ವಸ್ತುಗಳು ಹಾಳಾಗಿದ್ದು, ಅಡಿಗೆ ಮಾಡಿಕೊಳ್ಳಲು ಜನರು ಪರಿತಪಿಸಬೇಕಾದ ಸ್ಥಿತಿ ‌ನಿರ್ಮಾಣವಾಗಿತ್ತು ಹೀಗಾಗಿ ಇಂದು ಬೆಳಿಗ್ಗೆ ಮತ್ತೆ ಸಂತ್ರಸ್ತರ ಮನೆಗಳಿಗೆ ಭೇಟಿ ನೀಡಿದ ಗೋಪಾಲಯ್ಯ 250 ಕ್ಕೂ ಹೆಚ್ಚು ಕುಟುಂಬಗಳಿಗೆ ‌ಬೆಳಗಿನ ತಿಂಡಿ ಮತ್ತು ಮಧ್ಯಾಹ್ನದ ‌ಊಟದ ವ್ಯವಸ್ಥೆ ಕಲ್ಪಿಸಿದರು.
 
ಒಳಚರಂಡಿ ತಡೆಗೋಡೆ ನಿರ್ಮಾಣ ಕಾಮಗಾರಿ ವೇಗವಾಗಿ ನಿರ್ಮಾಣ:
 
ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ ಕೈ ಗೊಂಡಿರುವ ಒಳಚರಂಡಿ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು‌ ತ್ವರಿತವಾಗಿ ಮುಗಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಇದೇ ವೇಳೆ ಸಚಿವರು ಸೂಚನೆ ನೀಡಿದರು.
 
ಮಧ್ಯರಾತ್ರಿಯೇ ಪರಿಸ್ಥಿತಿಯ ಅವಲೋಕನ:
 
ಮಧ್ಯರಾತ್ರಿಯೇ ಬಿಬಿಎಂಪಿ ಅಧಿಕಾರಿಗಳು ಮತ್ತು ಇಂಜಿನಿಯರ್ ಗಳನ್ನು ಸ್ಥಳಕ್ಕೆ ಕರೆಯಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಗುಜರಾತ್ ನಲ್ಲಿ ಗೋಡೆ ಕುಸಿದು 12 ಮಂದಿ ದುರ್ಮರಣ