Select Your Language

Notifications

webdunia
webdunia
webdunia
webdunia

ಬೇಸಿಗೆ ಮುನ್ನವೇ ಬೆಂಗಳೂರಿನಲ್ಲಿ ನೀರಿನ ಕೊರತೆ

water
ಬೆಂಗಳೂರು ;  ಬೆಂಗಳೂರಿನಲ್ಲಿ ಬೇಸಿಗೆ ಆರಂಭಕ್ಕೆ ಮುನ್ನವೇ ನೀರಿನ ಕೊರತೆ ಎದುರಾಗಿದೆ. ಟ್ಯಾಂಕರ್‌ ನೀರೂ ಸಹ ದಿನೇ ದಿನೇ ದುಬಾರಿಯಾಗುತ್ತಾ ಸಾಗುತ್ತಿದ್ದರೂ ಜನರು ನೀರು ಪೋಲು ಮಾಡುತ್ತಿರುವುದು ನಗರಕ್ಕೆ ನುಂಗಲಾರದ ತುತ್ತಾಗಿದೆ. 
 
ಬೆಂಗಳೂರಿನಲ್ಲಿ ಐದು ಹಂತಗಳಲ್ಲಿ ಕಾವೇರಿ ನೀರು ಪೂರೈಸಲಾಗುತ್ತಿದ್ದು ಪ್ರತಿದಿನ ನಗರವಾಸಿಗಳ ಬಳಕಗೆ ಎರಡು ಟಿಎಂಸಿ ನೀರು ಮೀಸಲಿಡಲಾಗಿದೆ. ಆದರೆ ಯಥೇಚ್ಛವಾಗಿ ನೀರು ಸಿಗುವ ಬಡಾವಣೆಗಳಲ್ಲಿ ರಸ್ತೆ ತೊಳೆಯಲು ಹಾಗೂ ಕಾರ್‌ ಸ್ವಚ್ಛಗೊಳಿಸಲು ಕಾವೇರಿ ನೀರು ಬಳಸುತ್ತಿದ್ದರೆ, ಮಿಕ್ಕ ಜನವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿಗೂ ಪರದಾಟ ಪ್ರಾರಂಭವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಗ್ನಿ ದುರಂತಕ್ಕೆ ಮೂವರು ಸಾವು