Publish Date: Thu, 12 Oct 2017 (18:29 IST)
Updated Date: Thu, 12 Oct 2017 (18:31 IST)
ಸಿಎಂ ಸಿದ್ದರಾಮಯ್ಯ ನಾಯಕತ್ವಕ್ಕೆ ನಾವೆಲ್ಲರು ಬದ್ಧರಾಗಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಪಕ್ಷದ ಹೈಕಮಾಂಡ್ ಆದೇಶದಂತೆ ನಡೆಯುತ್ತೇವೆ. ಸಿಎಂ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.
ಮುಂಬರುವ ವಿಧಾನಸಭೆ ಚುನಾವಣೆಗೆ ರಣನೀತಿ ರೂಪಿಸುವಂತೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ. ನಾವು ನಡೆಸಿರುವ ತಯಾರಿಯ ಬಗ್ಗೆಯೂ ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ಚುನಾವಣೆ ಎದುರಿಸುವ ಬಗ್ಗೆ ರೋಡ್‌ಮ್ಯಾಪ್ ಸಿದ್ದಪಡಿಸಿದ್ದೇವೆ. ಸರಕಾರ ಮತ್ತು ಪಕ್ಷದ ವತಿಯಿಂದ ಎರಡು ಪ್ರತ್ಯೇಕ ಯಾತ್ರೆಗಳನ್ನು ನಡೆಯಲಾಗುವುದು. ನವೆಂಬರ್ ತಿಂಗಳಲ್ಲಿ ಎರಡು ಪ್ರತ್ಯೇಕ ಯಾತ್ರೆಗಳು ನಡೆಯಲಿವೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.