Select Your Language

Notifications

webdunia
webdunia
webdunia
webdunia

ನಾವ್ಯಾರು ಪ್ರಧಾನಿ ಮೋದಿಗೆ ಸರಿಸಾಟಿಯಲ್ಲ: ದೇವೇಗೌಡ

ನಾವ್ಯಾರು ಪ್ರಧಾನಿ ಮೋದಿಗೆ ಸರಿಸಾಟಿಯಲ್ಲ: ದೇವೇಗೌಡ
ನವದೆಹಲಿ , ಗುರುವಾರ, 6 ಏಪ್ರಿಲ್ 2017 (16:26 IST)
ಕರ್ನಾಟಕ ಸಮುದ್ರದಲ್ಲಿ ಸಣ್ಣ ದ್ವೀಪವಿದ್ದಂತೆ. ನಾವ್ಯಾರು ಪ್ರಧಾನಿ ಮೋದಿಗೆ ಸರಿಸಾಟಿಯಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
 
ಇವಿಎಂ ವೋಟಿಂಗ್ ಮಷಿನ್‌ಗಳ ಬಗ್ಗೆ ನನಗೆ ಹೆಚ್ಚಿನ ಮಾಹಿತಿಯಿಲ್ಲ. ಮೋದಿ ಪಾರದರ್ಶಕವಾಗಿ ಚುನಾವಣೆ ನಡೆಸಲಾಗುವುದೆಂದು ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
 
ಚುನಾವಣೆಯಲ್ಲಿ ಸೋತ ನಂತರ ಸಬೂಬಗಳನ್ನು ಹೇಳುವುದು ಸರಿಯಲ್ಲ. ಜನಾದೇಶವನ್ನು ಪ್ರತಿಯೊಬ್ಬರು ಗೌರವಿಸಬೇಕಾಗುತ್ತದೆ. ಸೋಲು ಮತ್ತು ಗೆಲುವನ್ನು ಸಮನಾಗಿ ಸ್ವೀಕರಿಸುವುದು ಒಳಿತು ಎಂದು ಅಭಿಪ್ರಾಯಪಟ್ಟಿದ್ದಾರೆ.
 
ನಂಜನಗೂಡು ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷ ತಟಸ್ಥವಾಗಿದ್ದು, ಮುಂದಿನ ವಿಧಾನಸಭೆ ಚುನಾವಣೆಗಾಗಿ ಸಿದ್ದತೆ ನಡೆಸಲಾಗುತ್ತಿದೆ. ರಾಜ್ಯದ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕಲಾಗುವುದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಹಣ ಹಂಚಿದರಾ ಕಾಂಗ್ರೆಸ್ ಮುಖಂಡೆ ಲಕ್ಷ್ಮೀ ಹೆಬ್ಬಾಳ್ಕರ್..?