ಕಾವೇರಿ ನೀರು ಹಂಚಿಕೆ ಬಗ್ಗೆ ಸುಪ್ರೀಂಕೋರ್ಟ್ ಪ್ರತಿ ಬಾರಿ ಆದೇಶ ನೀಡಿದಾಗ ತಮಿಳುನಾಡಿಗೆ ನೀರು ಬಿಟ್ಟಿದ್ದೇವೆ. ನಿರಂತರವಾಗಿ ಆದೇಶ ಪಾಲಿಸುತ್ತಿದ್ದರೂ ಇದೀಗ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಆದೇಶ ನೀಡಿರುವುದು ಸಹಿಸಲು ಸಾಧ್ಯವಿಲ್ಲ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ.
ಕಾವೇರಿ ಜಲಾನಯನದಲ್ಲಿ ವಸ್ತು ಸ್ಥಿತಿ ತೀವ್ರ ವಿರುದ್ಧವಾಗಿದೆ. ತಮಿಳುನಾಡಿಗೆ ನೀರು ಬಿಡಲು ಜಲಾನಯನದಲ್ಲಿ ನೀರಿಲ್ಲ. ಆದ್ದರಿಂದ, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸರ್ವಪಕ್ಷಗಳ ಸಭೆಯ ನಂತರ ಬರುವ ತೀರ್ಮಾನದಂತೆ ನಡೆದುಕೊಳ್ಳಲು ಸರಕಾರ ನಿರ್ಧರಿಸಿದೆ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ