Select Your Language

Notifications

webdunia
webdunia
webdunia
webdunia

ನಾವು ತಾತ್ಕಾಲಿಕ, 15 ದಿನದೊಳಗೆ ಸಂಪುಟ ವಿಸ್ತರಣೆ: ಎಂಬಿ ಪಾಟೀಲ್

Minister MB Patil
ಬಾಗಲಕೋಟೆ: ಸದ್ಯಕ್ಕೆ ನಾವು ತಾತ್ಕಾಲಿಕ ಮಾತ್ರ. ಮುಂದಿನ 15 ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದ್ದು, ಆ ಸಂದರ್ಭದಲ್ಲಿ ನಿಮ್ಮ ಜಿಲ್ಲೆಯವರಿಗೇ ಸಚಿವ ಸ್ಥಾನ ಸಿಗುತ್ತದೆ.  ಮುಂದಿನ ಹದಿನೈದು ದಿನಗಳ ಒಳಗಾಗಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದರು.

ಬಾಗಲಕೋಟೆಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಇದೇ ವೇಳೆ ಜಿಲ್ಲೆಗೆ ಸಚಿವ ಸ್ಥಾನದ ಪ್ರಾತಿನಿಧ್ಯ ಸಿಗದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಇಷ್ಟು ದಿನಗಳ ಕಾಲ ನಿಮ್ಮ ಜಿಲ್ಲೆಯವರು ಸಚಿವ ಸಂಪುಟದಲ್ಲಿ ಇರಲಿಲ್ಲವೇ ಎಂದು ಮರುಪ್ರಶ್ನಿಸಿದರು.

ಸಂಪುಟ ವಿಸ್ತರಣೆಯ ಸಂಪೂರ್ಣ ನಿರ್ಧಾರ ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟಿದ್ದು. ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ ಎಂದು ಹೇಳಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಕೇತನ್ ಅಗರ್ವಾಲ್ ಹತ್ಯೆ ಬಗ್ಗೆ ಅಪಹಾಸ್ಯ: ದಂತವೈದ್ಯೆ ಡಾ.ಮುಸ್ಕಾನ್ ಸೋನಿಗೆ ಬಿಗ್‌ ಶಾಕ್‌, Video