Select Your Language

Notifications

webdunia
webdunia
webdunia
webdunia

ಈ ಪ್ರಶ್ನೆಗಳ ಮೂಲಕ ರಾಹುಲ್ ಅವರನ್ನು ರಾಜ್ಯಕ್ಕೆ ಸ್ವಾಗತಿಸುತ್ತಿದ್ದೇವೆ- ಕೇಂದ್ರ ಸಚಿವ ಅನಂತ್ ಕುಮಾರ್

ಈ ಪ್ರಶ್ನೆಗಳ ಮೂಲಕ ರಾಹುಲ್ ಅವರನ್ನು ರಾಜ್ಯಕ್ಕೆ ಸ್ವಾಗತಿಸುತ್ತಿದ್ದೇವೆ- ಕೇಂದ್ರ ಸಚಿವ ಅನಂತ್ ಕುಮಾರ್
ಬೆಂಗಳೂರು , ಗುರುವಾರ, 26 ಏಪ್ರಿಲ್ 2018 (06:56 IST)
ಬೆಂಗಳೂರು : ರಾಜ್ಯದಲ್ಲಿ ಒಟ್ಟು 7523 ಮಹಿಳೆಯರ ಹತ್ಯೆಯಾಗಿದೆ. ಆದ್ದರಿಂದ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಕ್ಯಾಂಡಲ್ ಲೈಟ್ ಹಿಡಿದು ಪ್ರತಿಭಟನೆ ನಡೆಸುವರೇ ಎಂಬುದನ್ನು ಅವರು ಸ್ಪಷ್ಟಪಡಿಸಬೇಕು ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಹೇಳಿದ್ದಾರೆ.


ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ 3718 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ, ಈ ಬಗ್ಗೆ ಯಾವ ಕ್ರಮ ತೆಗೆದುಕೊಂಡಿದ್ದೀರಿ. ದೇಶದ ಬೇರೆ ಯಾವುದೇ ರಾಜ್ಯಗಳಲ್ಲಿ ಈ ಪ್ರಮಾಣದ ಆತ್ಮಹತ್ಯೆ ಪ್ರಕರಣ ನಡೆದಿಲ್ಲ. ಮೋದಿ ಕೊಟ್ಟ ಹಣವನ್ನು ಸಿದ್ದರಾಮಯ್ಯ ಯಾವ ರೀತಿ ಖರ್ಚು ಮಾಡಿದ್ದಾರೆ ಎಂಬದನ್ನು ಲೆಕ್ಕ ಕೊಡಬೇಕು. ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಮುನ್ನ ರಾಜ್ಯದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ, ಅತ್ಯಾಚಾರಗಳ ಬಗ್ಗೆ ಉತ್ತರ ನೀಡಬೇಕು. ಈ ಪ್ರಶ್ನೆಗಳ ಮೂಲಕ ರಾಹುಲ್ ಅವರನ್ನು ರಾಜ್ಯಕ್ಕೆ ಸ್ವಾಗತಿಸುತ್ತಿದ್ದೇವೆ’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಮೋಸಗಾರ, ಸುಳ್ಳುಗಾರ. ಇವರಿಗೆ ಬಡವರ ಬಗ್ಗೆ ಯಾವುದೇ ರೀತಿಯ ಕಳಕಳಿ ಇಲ್ಲ- ಜನಾರ್ದನ ರೆಡ್ಡಿ ವಾಗ್ದಾಳಿ