ಬೆಂಗಳೂರು : ಸ್ವಾರ್ಥಕ್ಕೆ ಸುಳ್ಳು ಹೇಳುವ ಕೆಲಸ ಮಾಡುತ್ತಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಮನದಾಳದ ಮಾತನ್ನು ಆಡಿದ್ದಾರೆ.
									
			
			 
 			
 
 			
			                     
							
							
			        							
								
																	ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಮತ್ತು ವಾರ್ತಾ ಇಲಾಖೆ ಸಹಯೋಗದಲ್ಲಿ ಗಾಂಧಿ ಭವನದಲ್ಲಿ ನಡೆದ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಿಎಂ ಮಾತನಾಡಿದರು.
									
										
								
																	ಗಾಂಧಿಯವರ ಆತ್ಮಕಥೆ ಎರಡನೇ ಸಾರಿ ಓದುತ್ತಿದ್ದೇನೆ. ಅವರು ಹೇಳಿದ ವಿಚಾರ ನನ್ನ ಜೀವನದಲ್ಲಿ ಅಳವಡಿಕೆ ಮಾಡಿಕೊಳ್ಳುವ ಕೆಲಸ ಮಾಡುತ್ತಿದ್ದೇನೆ. ಸ್ವಾರ್ಥಕ್ಕೆ ಸುಳ್ಳು ಹೇಳುವ ಕೆಲಸ ಮಾಡುತ್ತೇವೆ. ಅನಾವಶ್ಯಕ ಸುಳ್ಳುಗಳನ್ನು ಹೇಳುತ್ತಿದ್ದೇವೆ. ಅನಾವಶ್ಯಕ ಸುಳ್ಳುಗಳನ್ನ ನಾವು ಕಡಿಮೆ ಮಾಡುವ ಕೆಲಸ ಮಾಡಬೇಕು ಎಂದು ಹೇಳಿದರು.