Daily Horoscope

Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಸರ್ಕಾರವನ್ನು ಬುಡ ಸಮೇತ ಕಿತ್ತು ಹಾಕಲು ತೀರ್ಮಾನ ಮಾಡಿದ್ದೇವೆ: ವಿಜಯೇಂದ್ರ

BY Vijayendra
ಮೈಸೂರು: ಬಿಜೆಪಿಗೆ ಒಳ್ಳೆಯ ದಿನಗಳು ಶುರುವಾಗಿದೆ, ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಇಂದು ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆಯನ್ನು ಅಳಿಸಿ’ ಎಂಬ ಶೀರ್ಷಿಕೆಯಡಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ 4 ಕ್ಷೇತ್ರಗಳಲ್ಲೂ ಎನ್.ಡಿ.ಎ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಸಂತಸ ವ್ಯಕ್ತಪಡಿಸಿದರು.
 
ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ 23 ಸಾವಿರ ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಪ್ರತಿಯೊಂದು ಕ್ಷೇತ್ರದಲ್ಲೂ ನಮ್ಮ ಅಭ್ಯರ್ಥಿಗಳು ವಿಜಯ ಸಾಧಿಸಿದ್ದಾರೆ. ಸೋಲಿಲ್ಲದ ಸರದಾರ ಎಂದು ಮೆರೆಯುತ್ತಿದ್ದ ಕಾಂಗ್ರೆಸ್ ಅಭ್ಯರ್ಥಿಯನ್ನು 900ಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಸೋಲಿಸಿದ್ದಾರೆ. ರಾಜ್ಯದ ಪ್ರಜ್ಞಾವಂತ ಮತದಾರರಿಗೆ, ಬಿಜೆಪಿ-ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದರು.
 
ಈ ಫಲಿತಾಂಶ ನಾನಾ ರೀತಿಯ ವಿಶ್ಲೇಷಣೆಗೆ ಕಾರಣವಾಗಿದೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಭ್ರಮೆಯಲ್ಲಿದೆ. ಅಧಿಕಾರದ ಅಮಲಿನಲ್ಲಿ ತೇಲುತ್ತಿದೆ. ನಾಡಿನ ರೈತರ ಜೊತೆ ಚೆಲ್ಲಾಟವಾಡಿ ಒಂದೇ ಒಂದು ಕೆಲಸ ಮಾಡಿಲ್ಲ. ಬರಗಾಲದ ಪರಿಹಾರ ಕೊಡಲು ಸಾಧ್ಯವಾಗಿಲ್ಲ, ಉದ್ಯೋಗ ಕೊಡಲು ಆಗುತ್ತಿಲ್ಲ. ಮುಡಾ ಹಗರಣ, ವಾಲ್ಮೀಕಿ ಹಗರಣ, ಸಚಿವರ ರಾಜೀನಾಮೆ ಇದೇ ಕಾಂಗ್ರೆಸ್ ಆಡಳಿತ. ಬಳ್ಳಾರಿ ಚಲೋ ಮೂಲಕ ಕಾಂಗ್ರೆಸ್ ಬಣ್ಣ ಬಯಲು ಮಾಡಿದ್ದೇವೆ. ನಮ್ಮ ಹೋರಾಟದ ಪರಿಣಾಮ ಜನರು ಈ ಬಾರಿ ಎನ್.ಡಿ.ಎ ಸರ್ಕಾರ ತರಲು ಚಿಂತನೆ ನಡೆಸಿದ್ದಾರೆ ಎಂದು ಹೇಳಿದರು.
 
ಈ ಚುನಾವಣೆ ಫಲಿತಾಂಶ 120 ರಿಂದ 130 ಕ್ಷೇತ್ರದ ಮತದಾರರು ಕೊಟ್ಟಿರುವ ತೀರ್ಪು. ಸಿಎಂ ಮತ್ತು ಡಿಸಿಎಂ ಕಪಟ ನಾಟಕ ಆಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಬುಡಸಮೇತ ಕಿತ್ತು ಹಾಕುವ ತೀರ್ಮಾನಕ್ಕೆ ಜನ ಬಂದಿದ್ದಾರೆ. ರಾಜ್ಯದ ಹಣಕಾಸಿನ ಪರಿಸ್ಥಿತಿ ಹದಗೆಟ್ಟಿದೆ. ಇದು ಮೊದಲು ಅಧಿಕಾರ ಬಿಟ್ಟು ಹೋಗಿ ಎಂಬ ಸಂದೇಶ. ಬಿಜೆಪಿಗೆ ಆಶೀರ್ವಾದ ಮಾಡಲು ಮತದಾರರು ಸಿದ್ಧರಾಗಿದ್ದಾರೆ. ನಿಮ್ಮ ಸಣ್ಣಪುಟ್ಟ ಗೊಂದಲ ಬದಿಗಿಟ್ಟು ಎಲ್ಲರೂ ಒಗ್ಗಟ್ಟಿನಿಂದ ಹೋಗಿ ಎಂಬ ಸಂದೇಶವನ್ನು ಜನರು ಬಿಜೆಪಿಗೂ ಕೊಟ್ಟಿದ್ದಾರೆ ಎಂದು ನುಡಿದರು.
 
ಪ್ರಧಾನಿಯಾಗುವ ಆಸೆಗೆ ರಾಹುಲ್ ಗಾಂಧಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾಗಿದ್ದಾರೆ. ಈ ಚುನಾವಣೆ ಅವರಿಗೂ ಸ್ಪಷ್ಟ ಸಂದೇಶ. ಬ್ಯಾಲೆಟ್ ಪೇಪರ್ ಬಳಸಿ ನಡೆಸಿದ ಈ ಚುನಾವಣೆಯಲ್ಲೂ ಕಾಂಗ್ರೆಸ್ ಸೋತಿದೆ. ಕಾಂಗ್ರೆಸ್ ಗೆ ಯಾವುದರ ಮೇಲೂ ನಂಬಿಕೆ ಇಲ್ಲ. ಈ ಫಲಿತಾಂಶವನ್ನು ಸಿಎಂ, ಡಿಸಿಎಂ ಮತ್ತು ರಾಹುಲ್ ಗಾಂಧಿಗೆ ತಲುಪಿಸಬೇಕು. ಮುಂದಿನ ಬಾರಿ ರಾಜ್ಯದಲ್ಲಿ ಎನ್.ಡಿ.ಎ ಸರ್ಕಾರ ಬರುವುದು ಖಚಿತ. ಇದನ್ನು ತಡೆಯಲು ಯಾವುದೇ ಕೆಟ್ಟ ಶಕ್ತಿಗಳಿಗೂ ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.
 
ರಾಜ್ಯದಲ್ಲಿ ಬರವಿದೆ, ಪರಿಹಾರ ಘೋಷಣೆ ಮಾಡಿದರೂ ಅದು ಘೋಷಣೆಯಾಗಿ ಉಳಿದಿದೆ. ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ಕೊಡುತ್ತಾರೆ ಎಂದು ಜನ ಕಾಯುತ್ತಿದ್ದರು. ವಿಶೇಷ ವಿಮಾನದಲ್ಲಿ ಸಿಎಂ ಬೆಳಗಾವಿಗೆ ಹೋಗಿ, ಬೊಕ್ಕಸದಲ್ಲಿ ಹಣ ಇಲ್ಲ, ನಮಗೆ ಸಮಯ ಕೊಡಿ ಎಂದಿದ್ದಾರೆ. ಇದು ನಾಚಿಕೆಗೇಡು. ಇದನ್ನು ಹೇಳಲು ವಿಶೇಷ ವಿಮಾನದಲ್ಲಿ ಹೋಗಬೇಕಿತ್ತಾ? ಕಬ್ಬಿನಿಂದ ರಾಜ್ಯಕ್ಕೆ ದೊಡ್ಡ ಆದಾಯ ಬರುತ್ತಿದೆ. ಕಬ್ಬಿನ ಉಪ ಉತ್ಪನ್ನಗಳಿಂದ ಲಾಭ ಬರುತ್ತಿದೆ. ಪ್ರತಿ ಟನ್ ಕಬ್ಬಿಗೆ 9234 ರೂಪಾಯಿ ರಾಜ್ಯ ಸರ್ಕಾರಕ್ಕೆ ಬರುತ್ತದೆ. ಪ್ರತಿ ವರ್ಷ 15 ಸಾವಿರ ಕೋಟಿ ಆದಾಯ ಕಬ್ಬಿನಿಂದ ಬರುತ್ತಿದೆ. ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದು ಬಿಟ್ಟು, ರೈತರಿಗೆ 500 ರೂಪಾಯಿ ಪೆÇ್ರೀತ್ಸಾಹ ಧನ ನೀಡಿ, ರೈತರ ಜೀವನದ ಜೊತೆ ಚೆಲ್ಲಾಟ ಆಡುವುದನ್ನು ಬಿಡಿ ಎಂದು ಸಿಎಂ ಮತ್ತು ಡಿಸಿಎಂಗೆ ಸಲಹೆ ನೀಡಿದರು.
 
ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾಲಿಗೆ ಹರಿಬಿಟ್ಟವರಿಗೆ ಜನ ಬುದ್ಧಿ ಕಲಿಸುತ್ತಾರೆ. ನಿನ್ನೆಯ ಚುನಾವಣೆ ಫಲಿತಾಂಶ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ. ನಾವು 130 ಸೀಟು ಗೆಲ್ಲುತ್ತೇವೆ. ಇದು ಅಹಂಕಾರದ ಮಾತಲ್ಲ, ಆತ್ಮವಿಶ್ವಾಸದ ಮಾತು ಎಂದರು.
ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವ ವಿಚಾರಕ್ಕೆ, ವಿಜಯೇಂದ್ರಗೆ ಶಕ್ತಿ ಕೊಟ್ಟಿದ್ದು ಮೈಸೂರು ಜಿಲ್ಲೆ, ವರುಣಾ ಕ್ಷೇತ್ರ ರಾಜ್ಯಕ್ಕೆ ಪರಿಚಯ ಮಾಡಿಕೊಟ್ಟಿದೆ. ಮುಂದೆ ವರುಣಾದಲ್ಲಿ ನಿಲ್ಲುತ್ತೀರಾ ಎಂಬ ಪ್ರಶ್ನೆಗೆ ಕಾದು ನೋಡಿ, ಸಮಯ ಉತ್ತರ ಕೊಡುತ್ತದೆ ಎಂದು ತಿಳಿಸಿದರು.
 
ರಾಜಮನೆತನದ ಬಗ್ಗೆ ಸಚಿವ ಯತೀಂದ್ರ ಹೇಳಿಕೆ ವಿಚಾರಕ್ಕೆ, ಈ ರೀತಿಯ ಹೇಳಿಕೆ ನೀಡುವುದು ಅಕ್ಷಮ್ಯ ಅಪರಾಧ. ಮಾಜಿ ಸಿಎಂ ಪುತ್ರ ಯತೀಂದ್ರ ಅವರ ಹೇಳಿಕೆ ಖಂಡನೀಯ. ಯದುವಂಶಸ್ಥರನ್ನು ಅಪಮಾನ ಮಾಡುವುದು ಸರಿಯಲ್ಲ. ಇದು ಉದ್ಧಟತನ, ಅವಿವೇಕತನದ ಹೇಳಿಕೆ. ಇದು ನೀಚತನದ ಪರಮಾವಧಿ. ಸ್ವಲ್ಪವಾದರೂ ಗೌರವವಿದ್ದರೆ ಮುಖ್ಯಮಂತ್ರಿ ಮತ್ತು ಉಸ್ತುವಾರಿ ಸಚಿವರು ಸೇರಿದಂತೆ ಎಲ್ಲರೂ ಈ ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
 

Share this Story:

Follow Webdunia kannada

ಮುಂದಿನ ಸುದ್ದಿ

ವೋಟ್ ಚೋರಿ ಎನ್ನುತ್ತಿರುವ ಕಾಂಗ್ರೆಸ್ಸಿಗರಿಗೆ ವಿಧಾನಪರಿಷತ್ ಚುನಾವಣೆ ಫಲಿತಾಂಶ ತಕ್ಕ ಉತ್ತರ ನೀಡಿದೆ: ವಿಜಯೇಂದ್ರ