Publish Date: Sat, 13 May 2017 (13:50 IST)
Updated Date: Sat, 13 May 2017 (13:53 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಎದುರು ರಾಜ್ಯದ ಸಮಸ್ಯೆಗಳ ಬಗ್ಗೆ ಬಾಯಿಬಿಡದ ಬಿಜೆಪಿ ಮುಖಂಡರು ರಾಜ್ಯ ಸರಕಾರದ ಬಗ್ಗೆ ಆರೋಪ ಪಟ್ಟಿ ಬಿಡುಗಡೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.
ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ಸಾಲಮನ್ನಾ, ಮಹದಾಯಿ ಯೋಜನೆಗಳ ಬಗ್ಗೆ ಕೇಂದ್ರ ಸರಕಾರದ ಮುಂದೆ ಮೌನವಾಗಿದ್ದ ಯಡಿಯೂರಪ್ಪ ರಾಜ್ಯ ಸರಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಮುಂದಿನ ವಿಧಾನಸಭೆ ಚುನಾವಣೆ ನನ್ನ ನೇತೃತ್ವದಲ್ಲಿಯೇ ನಡೆಯಲಿದೆ. ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.