Publish Date: Tue, 10 Jan 2017 (11:34 IST)
Updated Date: Tue, 10 Jan 2017 (11:37 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವ ಗುರಿ ಇಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವ ಗುರಿ ಹೊಂದಿತ್ತು. ಆದರೆ, ಇದೀಗ ಬ್ರಿಗೇಡ್‌ನ ನಿಲವು ಬದಲಾಯಿಸಲಾಗಿದೆ ಎಂದು ಪರೋಕ್ಷವಾಗಿ ಯಡಿಯೂರಪ್ಪನವರಿಗೆ ಟಾಂಗ್ ನೀಡಿದ್ದಾರೆ.
ರಾಜ್ಯ ಬಿಜೆಪಿ ಪಾಳಯದಲ್ಲಿ ಗೊಂದಲ ಇದೆ. ತಮ್ಮ ಹಾಗೂ ಯಡಿಯೂರಪ್ಪ ನಡುವೆ ವೈಮನಸ್ಸು ಇರುವುದು ನಿಜ ಎಂದು ಒಪ್ಪಿಕೊಂಡರು.
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ