Publish Date: Mon, 02 Oct 2023 (16:03 IST)
Updated Date: Mon, 02 Oct 2023 (16:06 IST)
ಜೆಡಿಎಸ್ ಜೊತೆಗಿನ ಮೈತ್ರಿಗೆ ಬಿಜೆಪಿಯಲ್ಲಿ ಯಾರಿಗೂ ಅಸಮಾಧಾನ ಇಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಮೈತ್ರಿ ವಿಚಾರದಲ್ಲಿ ಅವರನ್ನು ಪರಿಗಣಸದೇ ಇರುವುದು ಅವರ ಪಕ್ಷಕ್ಕೆ ಸಂಬಂಧಿಸಿದ ವಿಚಾರ. ಆದರೆ, ಮೈತ್ರಿಗೆ ಸಂಬಂಧಿಸಿದಂತೆ ನನಗೆ ಎಲ್ಲಾ ಮಾಹಿತಿ ನೀಡಿದ್ದಾರೆ. ನಮ್ಮ ಪಕ್ಷದ ಹೈಕಮಾಂಡ್ ನಾಯಕರು ಈ ಬಗ್ಗೆ ನನ್ನ ಜೊತೆ ಚರ್ಚೆ ನಡೆಸಿದ್ದಾರೆ. ಸೀಟು ಹಂಚಿಕೆ ಬಗ್ಗೆ ಮಾತುಕತೆ ನಡೆಯುತ್ತಿದೆ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ ಎಂದರು.ಇನ್ನು ಜೆಡಿಎಸ್ ನಲ್ಲಿ ವಿಶೇಷವಾಗಿ ಮುಸ್ಲಿಂ ನಾಯಕರಿಗೆ ಈ ಬಗ್ಗೆ ಅಸಮಾಧಾನ ಇರಬಹುದು. ಕೆಲವು ನಾಯಕರು ಪಕ್ಷ ಬಿಟ್ಟು ಹೋಗುತ್ತಿರಬಹುದು. ಮುಸ್ಲಿಂ ನಾಯಕರು ಜೆಡಿಎಸ್ ತೊರೆಯುತ್ತಿರುವುದರಿಂದ ಯಾವುದೇ ಪರಿಣಾಮ ಬೀರುವುದಿಲ್ಲ ಅಂತ ಹೇಳಿದ್ದಾರೆ.