Webdunia - Bharat's app for daily news and videos

Install App

ಗೂಂಡಾಗಿರಿ ಮಾಡುತ್ತಿರುವವರಿಂದ ನಾವೇನು ಪಾಠ ಕಲಿಯಬೇಕಿಲ್ಲ: ಸಿಎಂ ಸಿದ್ದರಾಮಯ್ಯ

Sampriya
ಭಾನುವಾರ, 18 ಜನವರಿ 2026 (17:46 IST)
ಬೆಂಗಳೂರು: ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ ಎಷ್ಟು ಪ್ರಕರಣವನ್ನು ಸಿಬಿಐಗೆ ವಹಿಸಿದ್ದಾರೆ. ನಾವು ನಮ್ಮ ಅಧಿಕಾರದಲ್ಲಿ ಸುಮಾರು ಏಳೆಂಟು ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೆವು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.

ಕಾಂಗ್ರೆಸ್ ನಾಯಕರ ಬಗ್ಗೆ ಶ್ರೀರಾಮುಲು, ಜನಾರ್ಧನ ರೆಡ್ಡಿಯವರು ತುಚ್ಛವಾಗಿ ಮಾತನಾಡುತ್ತಾರೆ. ಬಿಜೆಪಿಯವರಿಗೆ ಸಂಸ್ಕೃತಿ ಇಲ್ಲ ಎನ್ನುವುದು ಇದರಿಂದ ಗೊತ್ತಾಗುತ್ತದೆ.  ಇನ್ನೂ ಜನಾರ್ಧನ ರೆಡ್ಡಿ ಅವರನ್ನು ಬಳ್ಳಾರಿಗೆ ಬರಬಾರದಂತೆ ಯಾಕೆ ಹೇಳಲಾಗಿತ್ತು, ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ವರ್ತಿಸಿದವರು ಯಾರು? ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಈ ಬಗ್ಗೆ ವರದಿ ಕೊಟ್ಟಿದ್ದರು.

ಇನ್ನೂ ನಾನು ಲೋಕಸಭಾ ಚುನಾವಣೆಗೆಂದು ಬಳ್ಳಾರಿಗೆ ಹೋಗಿದ್ದ ವೇಳೆ ನನಗೆ  ಸಾರ್ವಜನಿಕ ಸಭೆ ನಡೆಸಲು ಎಲ್ಲೂ ಸ್ಥಳವನ್ನು ನೀಡಲಿಲ್ಲ. ಕೊನೆಗೆ ಕುರುಬರ ದೇವಸ್ಥಾನದ ಬಳಿ ಸಭೆ ನಡೆಸಿದೆವು. ಇವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ, ಸರ್ವಾಧಿಕಾರದಲ್ಲಿ ನಂಬಿಕೆ ಇದೆ ಎನ್ನಲು ಇದೊಂದು ಉದಾಹರಣೆ ಸಾಕು.

ಗೂಂಡಾಗಿರಿ ಮಾಡುತ್ತಿರುವವರಿಂದ ನಾವೇನು ಪಾಠ ಕಲಿಯಬೇಕಿಲ್ಲ. ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಅದರ ಆಶಯಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷ. ಬಿಜೆಪಿಯ ಜನಾಂದೋಲನದ ಹಿಂದೆ ರಾಜಕೀಯ ಉದ್ದೇಶ ಬಿಟ್ಟರೆ ಬೇರೇನಿದೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಗುವಿಗೆ ಸಿರಪ್ ನೀಡುವ ವಿಚಾರದಲ್ಲಿ ದಂಪತಿ ನಡುವೆ ಜಗಳ, ಅಂತ್ಯವಾಗಿದ್ದು ಒಬ್ಬರ ಸಾವಿನಲ್ಲಿ

ಮಹಿಳೆಯರು ದೇಶದ ನಿಜವಾದ ಶಕ್ತಿ: ರಾಹುಲ್ ಗಾಂಧಿ

ಹೋಂ ಸ್ಟೇಗೆ ಎಂಜಾಯ್ ಮಾಡಲು ಹೋಗಿದ್ದ ಪ್ರವಾಸಿಗ ಕಾಡಾನೆ ದಾಳಿಗೆ ಬಲಿ

ರೇಪ್ ಕೇಸ್ ಮುಚ್ಚಿ ಹಾಕಲು ಪಂಜಾಬ್ ಸಿಎಂ ಪತ್ನಿ ಲಂಚದ ಬೇಡಿಕೆ, ತನಿಖೆಗೆ ನೋಟಿಸ್ ಜಾರಿ

ಆಟೋದಲ್ಲಿ ಫ್ರೀ ಆಗಿ ಕರೆದೊಯ್ಯಲಿಲ್ಲ ಎಂದು ಚಾಲಕನ ಮೇಲೆ ಇದೆಂಥಾ ಅನ್ಯಾಯವೆಸಗಿದ ಪೊಲೀಸ್ ಅಧಿಕಾರಿ Video

ಮುಂದಿನ ಸುದ್ದಿ
Show comments