Select Your Language

Notifications

webdunia
webdunia
webdunia
webdunia

ಕಾವೇರಿ ನೀರಿನ ವಿಚಾರದಲ್ಲಿ ನಮಗೆ ರಾಜಕಾರಣ ಮಾಡಲು ಇಷ್ಟ ಇಲ್ಲ-ಬೊಮ್ಮಯಿ

ಕಾವೇರಿ ನೀರಿನ ವಿಚಾರದಲ್ಲಿ ನಮಗೆ ರಾಜಕಾರಣ ಮಾಡಲು ಇಷ್ಟ ಇಲ್ಲ-ಬೊಮ್ಮಯಿ
bangalore , ಗುರುವಾರ, 21 ಸೆಪ್ಟಂಬರ್ 2023 (15:21 IST)
ಇವತ್ತು ಕಾವೇರಿ ವಿಚಾರದಲ್ಲಿ ಸುಪ್ರೀಂ ಕೊರ್ಟ್ ಎರಡು ರಾಜ್ಯಗಳ ವಾದ ಕೇಳಿ ಸಿಡಬ್ಲುಎಂಎ ಆದೇಶ ಎತ್ತಿ ಹಿಡಿದಿದೆ. ಮುಂದಿನ 15 ದಿನ ಸಿಡಬ್ಲುಎಂಎ ಆದೇಶ ಪಾಲನೆ ಮಾಡಬೇಕು ಅಂತ ಹೇಳಿರುವುದು ದುರಾದೃಷ್ಟ. ಮತ್ತೊಮ್ಮೆ ಕರ್ನಾಟಕದ ವಸ್ತು ಸ್ಥಿತಿಯನ್ನು ಸುಪ್ರೀಂ ಕೋರ್ಟ್ಗೆ ಮನವರಿಕೆ ಮಾಡಬೇಕಿದೆ. ಕೇವಲ ಕರ್ನಾಟಕ ದ ಡ್ಯಾಮ್ ಗಳ ನೀರಿನ ಮಟ್ಟ ಲೆಕ್ಕ ಹಾಕುವುದಲ್ಲ. ತಮಿಳುನಾಡು ಡ್ಯಾಮ್ ಗಳಲ್ಲಿ ನ ನೀರಿನ ಮಟ್ಟ ಲೆಕ್ಕ ಹಾಕಬೇಕು. ಸಿಡಬ್ಲುಎಂಎ ಮೊದಲ ಆದೇಶ ಬಂದಾಗಲೇ ಸುಪ್ರೀಂ ‌ಕೋರ್ಟ್ ಮುಂದೆ ಮೆಲ್ಮನವಿ ಹೋಗಬೇಕಿತ್ತು.ಸರ್ಕಾರ ಎರಡು ಬಾರಿ ನೀರು ಬಿಟ್ಟು ಈಗ ಸುಪ್ರೀಂ ಕೊರ್ಟ್ ಮುಂದೆ ಹೋಗಿದ್ದಾರೆ.ಸುಪ್ರೀಂಕೋರ್ಟ್ ಸಂಪೂರ್ಣ ವಾಗಿ ಸಿಡಬ್ಲುಎಂ ಮೇಲೆ ಅವಲಂಬನೆ ಆಗಿದೆ.ಸಿಡಬ್ಲುಆರ್ ಸಿ ಸಿಡಬ್ಲುಎಂಎ ಎರಡೂ ಧೋರಣೆ ಸರಿಯಿಲ್ಲ. ಸಿಡಬ್ಲುಎಂಎ ಇಲ್ಲಿನ ವಾಸ್ತವ ಪರಿಸ್ಥಿತಿಯನ್ನು ನೋಡಬೇಕು. ಕೇವಲ ಅಂಕಿ ಅಂಶಗಳನ್ನು ಇಟ್ಟುಕೊಂಡು ಆದೇಶ ಮಾಡುತ್ತಿವೆ.ರಾಜ್ಯ ಸರ್ಕಾರ ಮೆಲ್ಮನವಿ ಸಲ್ಲಿಸುವುದಾಗಿ ಹೇಳುತ್ತಾರೆ.ತಮಿಳುನಾಡು ಅಕ್ರಮವಾಗಿ ನೀರು ಬಳಕೆ ಮಾಡಿಕೊಂಡಿದೆ. ಅದನ್ನು ಸುಪ್ರೀಂಕೋರ್ಟ್ ಗಮನಕ್ಕಡ ತರಬೇಕು.ರಾಜ್ಯ ಸರ್ಕಾರ ಕೇವಲ ನಮ್ಮಲ್ಲಿ ನೀರಿಲ್ಲ ಅಂತ ಹೇಳುವುದಷ್ಟೇ ಆಗಲ್ಲ ಎಂದು ಬೆಂಗಳೂರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
 
 ಬೆಂಗಳೂರು ಒಂದು ಅಂತಾರಾಷ್ಟ್ರೀಯ ನಗರ ಇಲ್ಲಿ ಎಲ್ಲ ಬಾಗದ ಜನರು ಬರುತ್ತಾರೆ.ಬೆಂಗಳೂರಿಗೆ ಪ್ರತ್ಯೇಕವಾಗಿ ನೀರು ಇಟ್ಟಿದ್ದಾರೆ. ಅದನ್ನು ಸುಪ್ರೀಂ ಕೋರ್ಟ್ ಮುಂದೆ ವಾದ ಮಾಡಬೇಕು.ತಮಿಳುನಾಡಿಗೆ ನವೆಂಬರ್ ನಲ್ಲಿ ಮತ್ತೊಂದು ಹಿಂಗಾರು ಮಾನ್ಸೂನ್ ಮಳೆ ಬರುತ್ತದೆ.ಸದ್ಯ ಕುಡಿಯುವ ನೀರನ್ನಾದರೂ ಉಳಿಸಿಕೊಳ್ಳಲು ರಾಜ್ಯ ಸರ್ಕಾರ ಹೋರಾಟ ಮಾಡಬೇಕು.ಇದರಲ್ಲಿ ನಮಗೆ ರಾಜಕಾರಣ ಮಾಡಲು ಇಷ್ಟ ಇಲ್ಲ.ಈಗಾಗಲೇ ಬೆಳೆ ಒಣಗಿ ಹೋಗುತ್ತಿದೆ.ರಾಜ್ಯ ಸರ್ಕಾರ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಯಿ ಒತ್ತಾಯಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

5 ಸಾವಿರ ಕ್ಯೂಸೆಕ್​ ನೀರು ಹರಿಸುವಂತೆ ಆದೇಶ