ಕೃಷಿ ಹಾಗೂ ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿರುವ ಸಂದರ್ಭದಲ್ಲಿ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವೇ ಇಲ್ಲವೆಂದು ಸುಪ್ರೀಂ ಕೋರ್ಟ್ ಹಾಗೂ ತಮಿಳುನಾಡು ಸರಕಾರಕ್ಕೆ ಮನವರಿಕೆ ಮಾಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಕಾಲೂಕಿನ ಕೆಆರ್‌ಆಸ್ ಜಲಾಶಯಕ್ಕೆ ಭೇಟಿ ನೀಡಿ ನೀರು ಸಂಗ್ರಹದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನೀರಿನ ಕೊರತೆ ಇರುವ ಕುರಿತು ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿಗಳ ತಂಡ ರಚನೆ ಮಾಡಿ ವಾಸ್ತವ ಸ್ಥಿತಿ ಬಗ್ಗೆ ಅಧ್ಯಯನ ನಡಿಸಲಿ ಎಂದರು.
ಸಂಕಷ್ಟದಲ್ಲೂ ನೀರಿನ ಅಗತ್ಯವೋ ಅಷ್ಟು ನೀರನ್ನು ತಮಿಳುನಾಡಿಗೆ ಹರಿಸಲಾಗಿದೆ. ಈಗಿರುವ ನೀರು ಕುಡಿಯಲು ಸಾಧ್ಯವಾಗುವುದಿಲ್ಲ. ಈ ಕುರಿತು ಕರ್ನಾಟಕ ಪರ ವಕೀಲ ನಾರಿಮನ್ ಅವರು ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಿಕೊಡಬೇಕು ಎಂದು ತಿಳಿಸಿದರು.
ಕೆಆರ್‌ಎಸ್‌ನಿಂದ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು. ಸಕಷ್ಟ ಪರಿಸ್ಥಿತಿ ಎದುರಾದರೇ ರಾಜ್ಯ ಸರಕಾರದ ಜೊತೆ ನಾವಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ