Webdunia - Bharat's app for daily news and videos

Install App

ಮೈತ್ರಿ ಧರ್ಮವನ್ನು ನಾವು ಪಾಲಿಸುತ್ತೇವೆ-ದೇವೇಗೌಡ

geetha
ಸೋಮವಾರ, 4 ಮಾರ್ಚ್ 2024 (21:00 IST)
ಬೆಂಗಳೂರು-ಜೆ.ಪಿ.ಭವನದಲ್ಲಿ ಸೋಮವಾರ ರಾಜ್ಯ ಜೆಡಿಎಸ್‌ನ ಮಹಿಳಾ ಘಟಕದ ಅಧ್ಯಕ್ಷೆಯಾಗಿ ರಶ್ಮಿ ರಾಮೇಗೌಡ ಅವರು ಅಧಿಕಾರ ಸ್ವೀಕರಿಸಿದ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ದೇವೇಗೌಡ ಮಾಧ್ಯಮಗಳ ಜತೆ ಮಾತನಾಡಿದರು.ಮೈತ್ರಿ ಧರ್ಮವನ್ನು ನಾವು ಪಾಲಿಸುತ್ತೇವೆ. ಎಲ್ಲ ಕ್ಷೇತ್ರಗಳನ್ನು ಗೆಲ್ಲುವುದಕ್ಕೆ ಬಿಜೆಪಿ ಜತೆ ಸೇರಿ ಕೆಲಸ ಮಾಡುತ್ತೇವೆ ಎಂದರು.
 
ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ಅಂತಿಮ ಹಂತದಲ್ಲಿದ್ದು, ಬಹುಶಃ ಒಂದು ವಾರದೊಳಗೆ ಎಲ್ಲ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಸೀಟು ಹಂಚಿಕೆ ವಿಚಾರದ ಬಗ್ಗೆ ಈಗಾಗಲೇ ಬಿಜೆಪಿ ನಾಯಕರ ಜತೆ ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ. ಬಹುಶಃ ಇನ್ನೊಮ್ಮೆ ಕೂತು ಚರ್ಚೆ ಮಾಡಿದರೆ ಅಲ್ಲಿಗೆ ಎಲ್ಲ ಅಂತಿಮ ಆಗುತ್ತದೆ ಎಂದು ದೇವೇಗೌಡ ತಿಳಿಸಿದರು.
 
ಕುಮಾರಸ್ವಾಮಿ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆಯೇ ಎನ್ನುವ ಮತ್ತೊಂದು ಪ್ರಶ್ನೆಗೆ, ಇನ್ನೊಂದು ವಾರದಲ್ಲಿ ಸೀಟು ಹಂಚಿಕೆ ಬಗ್ಗೆ ತೀರ್ಮಾನ ಆಗುತ್ತದೆ. ಜೆಡಿಎಸ್‌ಗೆ ಯಾವ ಯಾವ ಕ್ಷೇತ್ರ ಎನ್ನುವುದು ಮೋದಿ, ಅಮಿತ್ ಶಾ, ನಡ್ಡಾ, ಕುಮಾರಸ್ವಾಮಿ ಅವರು ಸಮಾಲೋಚನೆ ಮಾಡುತ್ತಾರೆ. ಅಲ್ಲಿ ಅವರು ಸ್ಪರ್ಧೆ ಮಾಡಬೇಕೆ? ಬೇಡವೆ? ಎನ್ನುವ ಅಂಶವನ್ನು ಚರ್ಚೆ ಮಾಡಿ ನಿರ್ಧಾರ ಮಾಡುತ್ತಾರೆ ಎಂದು ದೇವೇಗೌಡ ತಿಳಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments