Publish Date: Thu, 06 Jul 2017 (16:12 IST)
Updated Date: Thu, 06 Jul 2017 (16:14 IST)
ಮುಂಬರುವ ವಿಧಾನಸಭೆ ಚುನಾವಣೆಗಾಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕುರಿತಂತೆ ಆತುರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ನಮಗೆ ಆಪರೇಶನ್ ಕಮಲದ ಅನುಭವವಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಟಾಂಗ್ ನೀಡಿದ್ದಾರೆ.
ಚುನಾವಣೆಗಾಗಿ ಅಭ್ಯರ್ಥಿಗಳ ಪಟ್ಟಿಯನ್ನು ನಿಧಾನವಾಗಿ ಬಿಡುಗಡೆಗೊಳಿಸುವಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರಿಗೆ ಸಲಹೆ ನೀಡಿದ್ದಾಗಿ ಹೇಳಿದ್ದಾರೆ.
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಜೆಡಿಎಸ್ ಪಕ್ಷದ ಕಾರ್ಯಕಾರಿ ಸಮಿತಿ ಅಂತಿಮವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ ಎಂದು ತಿಳಿಸಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಗಾಗಿ ಪಕ್ಷ ಸಂಘಟನೆ ರಾಜ್ಯ ಪ್ರವಾಸ, ಪದಾಧಿಕಾರಿಗಳ ನೇಮಕ ಕುರಿತಂತೆ ಚರ್ಚಿಸಲಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.