Publish Date: Fri, 02 Sep 2022 (10:39 IST)
Updated Date: Fri, 02 Sep 2022 (10:41 IST)
ಮಂಗಳೂರು : ಲೈಂಗಿಕ ದೌರ್ಜನ್ಯ ಆರೋಪ ಎಸದುರಿಸುತ್ತಿರುವ ಮುರುಘಾ ಮಠಧ ಶರಣರನ್ನು ಈಗಾಗಲೇ ಬಂಧಿಸಲಾಗಿದ್ದು, ಪ್ರಕರಣ ಸಂಬಂಧ ಪೊಲಿಸರಿಗೆ ಮುಕ್ತ ಸ್ವಾತಂತ್ರ್ಯ ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶ್ರೀಗಳ ಬಂಧನ ವಿಳಂಬವಾಯಿತು ಅನ್ನೋ ಜನಸಾಮಾನ್ಯರ ಆಕ್ರೋಶಕ್ಕೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಎಲ್ಲಾ ಮಾತಿಗೂ ಉತ್ತರ ಕೊಡುವ ಅವಶ್ಯಕತೆ ಇಲ್ಲ. ಎಲ್ಲಾ ಕಾನೂನು ಪ್ರಕಾರವೇ ನಡೆಯುತ್ತಿದೆ.
ಈಗ ನಾನು ಮಾತನಾಡುವುದು ಸರಿಯಲ್ಲ. ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ಕೊಟ್ಟಿದ್ದೇವೆ. ಅವರು ಸರಿಯಾದ ರೀತಿಯಲ್ಲಿ ಅವರ ಕೆಲಸ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಯಾವುದೇ ವ್ಯಾಖ್ಯಾನ ಸರಿಯಲ್ಲ ಎಂದು ಗರಂ ಆದರು.