Select Your Language

Notifications

webdunia
webdunia
webdunia
webdunia

ನಾವು ಬಂಜಾರ ಸಮುದಾಯದವರಿಗೆ ಹಕ್ಕು ಕೊಟ್ಟಿದ್ದೇವೆ : ಮೋದಿ

ನಾವು ಬಂಜಾರ ಸಮುದಾಯದವರಿಗೆ ಹಕ್ಕು ಕೊಟ್ಟಿದ್ದೇವೆ : ಮೋದಿ
ಕಲಬುರಗಿ , ಶುಕ್ರವಾರ, 20 ಜನವರಿ 2023 (08:50 IST)
ಕಲಬುರಗಿ : ಹಿಂದಿನ ಸರ್ಕಾರ ಬಂಜಾರ ಸಮುದಾಯವನ್ನು ನಿರ್ಲಕ್ಷ್ಯಿಸಿತ್ತು. ಆದರೆ ನಮ್ಮ ಸರ್ಕಾರ ಅವರಿಗೆ ಹಕ್ಕು ಪತ್ರ ನೀಡುವ ಮೂಲ ಐತಿಹಾಸಿಕ ನಿರ್ಧಾರ ಕೈಗೊಂಡಿದೆ.

ಡಬಲ್ ಎಂಜಿನ್ ಸರ್ಕಾರ ಜನರ ಕಲ್ಯಾಣಕ್ಕೆ ಸಹಾಯ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು.

ಕಲಬುರಗಿಯ ಮಳಖೇಡಾದಲ್ಲಿ ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಬಳ್ಳಾರಿ, ವಿಜಯನಗರ  ಜಿಲ್ಲೆಗಳ ತಾಂಡಾ ಮತ್ತು ಹಟ್ಟಿಗಳಲ್ಲಿ ವಾಸವಾಗಿರುವ 51 ಸಾವಿರ ಕುಟುಂಬಸ್ಥರಿಗೆ ಹಕ್ಕು ಪತ್ರ ವಿತರಿಸುವ ಕಾರ್ಯಕ್ರಮದಲ್ಲಿ ಮೋದಿ ಮಾತನಾಡಿದರು.

ನಗಾರಿ ಬಾರಿಸಿದ ಮೋದಿ ಸಂಕೇತಿಕವಾಗಿ 5 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿದರು. ಆರಂಭದಲ್ಲಿ ಲಂಬಾಣಿ ಭಾಷೆಯಲ್ಲಿ ಮಾತನಾಡಿದ ಮೋದಿ ಬಳಿಕ ಹಿಂದಿಯಲ್ಲಿ ಭಾಷಣ ಮುಂದುವರಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಮುಂದಿನ 10 ವರ್ಷ ನೀರಾವರಿ ದಶಕ ; ಬೊಮ್ಮಾಯಿ