Publish Date: Sun, 19 Mar 2023 (09:59 IST)
Updated Date: Sun, 19 Mar 2023 (10:01 IST)
ಚಾಮರಾಜನಗರ : ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ವೇಗೆ 8 ಸಾವಿರ ಕೋಟಿ ರೂ. ಖರ್ಚು ಮಾಡಿದ್ದೇವೆ. ಇದರಿಂದ ಇಡೀ ರಾಷ್ಟ್ರವೇ ಮೈಸೂರನ್ನು ಸಂಪರ್ಕಿಸುತ್ತೆ. ಇದಕ್ಕೆ ಎಲ್ಲರೂ ಹೆಮ್ಮೆಪಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಲೆಮಹದೇಶ್ವರ ಬೆಟ್ಟದಲ್ಲಿ 108 ಅಡಿಯ ಮಹದೇಶ್ವರ ಪ್ರತಿಮೆ ಲೋಕಾರ್ಪಣೆಗೊಳಿಸಿದ ನಂತರ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇ ನಲ್ಲಿ ಮಳೆಯ ಅವಾಂತರದ ಬಗ್ಗೆ ಮಾಧ್ಯಮಗಳೊಂದಿಗೆ ಅವರು ಮಾತನಾಡಿದ್ದಾರೆ.
ಮಳೆ ಬಂದಾಗ ರಸ್ತೆಯಲ್ಲಿ ಸಣ್ಣಪುಟ್ಟ ಸಮಸ್ಯೆ ಕಾಣಿಸಿಕೊಳ್ಳುತ್ತವೆ, ಅದನ್ನೆಲ್ಲ ಸರಿಪಡಿಸುತ್ತೇವೆ. ಒಂದು ಬಾರಿ ಮಳೆಯಾದಾಗಲೇ ಸಮಸ್ಯೆ ಗೊತ್ತಾಗುವುದು ಎಂದು ಸಮರ್ಥಿಸಿಕೊಂಡಿದ್ದಾರೆ.