Publish Date: Thu, 17 Jan 2019 (10:50 IST)
Updated Date: Thu, 17 Jan 2019 (10:52 IST)
ಬೆಂಗಳೂರು : ‘ನಾವು ಯಾರೂ ಸಹ ಅಪರೇಷನ್ ಕಮಲ ಮಾಡಿಲ್ಲ. ಲೋಕಸಭೆ ಚುನಾವಣೆ ಬಗ್ಗೆ ಮಾತನಾಡಿದ್ದೇವೆ ಅಷ್ಟೇ ’ ಎಂದು ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ‘ನಮ್ಮೆಲ್ಲ ಶಾಸಕರನ್ನ ಒಟ್ಟಿಗೆ ಸೇರಿಸಿ ಸಭೆ ಮಾಡಿದ್ದೇವೆ. ಜೆಡಿಎಸ್-ಕಾಂಗ್ರೆಸ್ ನಲ್ಲಿ ಒಳ ಬೇಗುದಿ ಹೆಚ್ಚಾಗಿದೆ. ಅದನ್ನ ಅವರು ಸರಿ ಮಾಡಿಕೊಳ್ಳಲಿ. ಮಾಜಿ ಸಿಎಂ ಸಿದ್ದರಾಮಯ್ಯರದ್ದು ಎಲುಬಿಲ್ಲದ ನಾಲಿಗೆ. ಈಗಾಗ್ಲೆ ಚಾಮುಂಡೇಶ್ವರಿ ಕ್ಷೇತ್ರದ ಜನರು ತಕ್ಕ ಪಾಠ ಕಲಿಸಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದಾರೆ.
ಹಾಗೇ ‘ಎಸ್.ಎಂ.ಕೃಷ್ಣ ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದ ವೇಳೆ ಕಾಂಗ್ರೆಸ್ ನವರು ಏನು ಮಾಡಿದ್ದಾರೆಂದು ಎಲ್ಲರಿಗೂ ಗೊತ್ತಿದೆ. ಅವರ ಶಾಸಕರನ್ನ ಹಿಡಿದಿಟ್ಟುಕೊಳ್ಳೋದು ಅವರಿಗೆ ಬಿಟ್ಟಿದ್ದು. ಬಿಜೆಪಿ ಶಾಸಕರು ಎಲ್ಲಾದ್ರೂ ಹೋಗ್ತೀವಿ ಅವರಿಗ್ಯಾಕೆ ಬೇಕು? ನಮ್ಮ ಪಕ್ಷದ ಬಗ್ಗೆ ಮಾತನಾಡೋಕೆ ಅವರ್ಯಾರು? ಎಂದು ಅವರು ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.