Select Your Language

Notifications

webdunia
webdunia
webdunia
webdunia

10ಕೆಜಿ ಅಕ್ಕಿ ಕೊಡುತ್ತೇವೆ ಎಂದು ಮಾತು ಕೊಟ್ಟಿದ್ದೇವೆ-ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ

We have promised that we will give 10 kg of rice
bangalore , ಮಂಗಳವಾರ, 20 ಜೂನ್ 2023 (20:00 IST)
ಒಡಿಶಾ, ಚತ್ತೀಸಗಢ, ಆಂಧ್ರ, ತೆಲಂಗಾಣ ಎಲ್ಲಾ ಕಡೆ ಅಕ್ಕಿ ಖರೀದಿಯ ಪ್ರಯತ್ನ ನಡೆಯುತ್ತಿದೆ.ಗ್ಯಾರಂಟಿ ಪ್ರಕಾರ 10ಕೆಜಿ ಅಕ್ಕಿ ಕೊಡುತ್ತೇವೆ ಎಂದು ಮಾತು ಕೊಟ್ಟಿದ್ದೇವೆ.ಎಫ್ ಸಿಐ ಅಕ್ಕಿ ಕೊಡುತ್ತೇವೆ ಎಂದು ಜೂ.12ಕ್ಕೆ ಹೇಳಿದ್ದರು. ಜೂ.13 ಕ್ಕೆ ಕೊಡಲ್ಲ ಅಂತ ಹೇಳಿದ್ದಾರೆ.ಈ ಹಿನ್ನೆಲೆ ಸಿಎಂ ನಿರ್ದೇಶನದ ಮೇರೆಗೆ ನಾಳೆ ದೆಹಲಿಗೆ ತೆರಳುತ್ತೇನೆ. ಕೇಂದ್ರ ಆಹಾರ ಸರಬರಾಜು ಸಚಿವರನ್ನು ಭೇಟಿಯಾಗುತ್ತೇನೆ.ಈ ಮೂಲಕ ಅಕ್ಕಿ ಖರೀದಿಯ ಪ್ರಯತ್ನ ಮಾಡುತ್ತೇವೆ.ಎಫ್ ಸಿಐ ಬಳಿ 7 ಲಕ್ಷ ಟನ್ ಅಕ್ಕಿ ದಾಸ್ತಾನು ಇದೆ. ಅದರಲ್ಲಿ 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ನಮಗೆ ಬೇಕಾಗಿದೆ.ಕೇಂದ್ರ ಸರ್ಕಾರದ ಜೊತೆ ಅಕ್ಕಿ ಖರೀದಿಯ ಪ್ರಯತ್ನದ ಜೊತೆಗೆ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಗೆ ಪ್ರಯತ್ನ ಮಾಡುತ್ತೇವೆ.ಈ ಪ್ರಕ್ರಿಯೆ ಸ್ವಲ್ಪ ವಿಳಂಬ ಆಗಬಹುದು ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ
 
ಕೇಂದ್ರೀಯ ಬಂಡಾರ, ನಾಫೆಡ್, ಎನ್ ಸಿಸಿಎಫ್ ನಿಂದ ಅಕ್ಕಿ ಖರೀದಿ ಮಾಡಬೇಕಾಗಿದೆ. ಇದು ಸ್ವಲ್ಪ ವಿಳಂಬವಾಗಲಿದೆ.ಕಾನೂನು ಮತ್ತು ಟೆಂಡರ್ ಪ್ರಕ್ರಿಯೆಗಳಿಂದ ಸ್ವಲ್ಪ ವಿಳಂಬವಾಗಲಿದೆ.ಹಿಂದೆ ಇದೇ ಸಂಸ್ಥೆಗಳು ರಾಜ್ಯಕ್ಕೆ ಅಕ್ಕಿ ಪೂರೈಕೆ ಮಾಡುತ್ತಿದ್ದವು.ಈ ಸಂಸ್ಥೆಗಳಿಗೆ ಆದಷ್ಟು ಬೇಗ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಹೇಳಲಾಗಿದೆ.ಸ್ವಲ್ಪ ವಿಳಂಬವಾದರು ಅಕ್ಕಿಯನ್ನು ‌ನಾವು ಕೊಡುತ್ತೇವೆ.ಆಮ್ ಆದ್ಮಿ ಪಂಜಾಬ್ ಸರ್ಕಾರದಿಂದ ಅಕ್ಕಿ ಕೊಡಿಸುವುದಾಗಿ ಹೇಳಿರುವ ವಿಚಾರ ಎಲ್ಲಾ ರಾಜ್ಯಗಳಿಂದ ಅಕ್ಕಿ ಖರೀದಿಗೆ ಯತ್ನ ಮಾಡುತ್ತೇವೆ. ಬಹಳ ದೂರದಿಂದ ಬರುವ ಖರೀದಿಸುವ ಸಾಗಣೆ ವೆಚ್ಚ ಹೆಚ್ಚಾಗಲಿದೆ ಹಾಗಾಗಿ ಕೇಂದ್ರೀಯ ಸಂಸ್ಥೆಗಳಿಂದ ಖರೀದಿ ಮಾಡುತ್ತೇವೆ. ಇದರಿಂದ ಆರ್ಥಿಕ ಹೊರೆ ಕಡಿಮೆ ಆಗುತ್ತದೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಕೂಲ್ ಕೂಲ್ ಆದ ಸಿಲಿಕಾನ್ ಸಿಟಿ ವೆದರ್