ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

Sampriya
ಬುಧವಾರ, 29 ಅಕ್ಟೋಬರ್ 2025 (19:26 IST)
Photo Credit X
ಬೆಂಗಳೂರು: "ಬಿಜೆಪಿ ನಾಯಕರಿಗೆ ಬೆಂಗಳೂರು ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲ. ಅವರ ಕಾಲದಲ್ಲಿ ಬೆಂಗಳೂರು ಅಭಿವೃದ್ಧಿಗೆ ಏನು ಮಾಡಿದ್ದಾರೆ?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಆವರು ಬುಧವಾರ ಪ್ರತಿಕ್ರಿಯೆ ನೀಡಿದರು.

ಟನಲ್ ರಸ್ತೆ ಮಾಡಲು ಬಿಡುವುದಿಲ್ಲ ಎಂಬ ಸಂಸದ ತೇಜಸ್ವಿ ಸೂರ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ನಾನು ಈ ವಿಚಾರದಲ್ಲಿ ತಾಂತ್ರಿಕ ತಜ್ಞ ಅಲ್ಲ. ಅವರೂ ತಜ್ಞರಲ್ಲ. ಅದಕ್ಕಾಗಿಯೇ ಪ್ರತ್ಯೇಕ ತಾಂತ್ರಿಕ ತಜ್ಞರ ತಂಡವೇ ಇದೆ. ಅವರು ನಗರ ರೈಲು ಯೋಜನೆ ಮಾಡಬೇಕು ಎಂದು ಹೇಳುತ್ತಿದ್ದಾರೆ. ಅದನ್ನು ಮಾಡಲಿ, ಅದರಲ್ಲಿ ತಪ್ಪೇನು ಇಲ್ಲ. ಇದಕ್ಕೆ ಅಗತ್ಯವಾದ
ಅನುದಾನವನ್ನು ಕೇಂದ್ರ ಸರ್ಕಾರದಿಂದ ಕೊಡಿಸಲಿ. ನಮ್ಮದೇ ರಾಜ್ಯದ ಸೋಮಣ್ಣ ಅವರು ಕೇಂದ್ರ ಸಚಿವರಾಗಿದ್ದಾರೆ. ಅವರ ನೆರವು ಪಡೆಯಲಿ, ಏನು ಬೇಕಾದರೂ ಮಾಡಲಿ. ಆವರು ಹೋರಾಟ ಮಾಡುವುದಾದರೆ ಮಾಡಲಿ, ಬೇಡ ಎಂದು ಹೇಳಿದವರು ಯಾರು? ಬಿಜೆಪಿಯಲ್ಲಿ ತೇಜಸ್ವಿ ಸೂರ್ಯ ಹಾಗೂ ಅಶೋಕ್ ಹೊರತಾಗಿ ಉಳಿದ ಯಾವುದೇ ನಾಯಕರು ಮಾತನಾಡುತ್ತಿಲ್ಲ" ಎಂದು ತಿಳಿಸಿದರು.

ಸ್ಟೀಲ್ ಬ್ರಿಡ್ಜ್ ಮಾದರಿಯಲ್ಲೇ ಟನಲ್ ರಸ್ತೆ ಯೋಜನೆ ಮುರಿದು ಬೀಳುತ್ತಾ ಎಂದು ಕೇಳಿದಾಗ, "ನಾವು ನಮ್ಮ ಕೆಲಸ ಮಾಡುತ್ತೇವೆ. ನಮ್ಮ ಆಸಕ್ತಿ ನೋಡಿ ಜನರು ನಮ್ಮ ಪ್ರಯತ್ನಕ್ಕೆ ಬೆಂಬಲ ನೀಡುತ್ತಿದ್ದಾರೆ. ನಮ್ಮ ಕೆಲಸ ಅನುಷ್ಠಾನ ಆಗಲಿದೆ ಎಂಬ ವಿಶ್ವಾಸ ಇದೆ" ಎಂದರು. 

ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ, ದಲಿತ ಸಿಎಂ ವಿಚಾರವಾಗಿ ಸಚಿವರ ಚರ್ಚೆ ಬಗ್ಗೆ ಕೇಳಿದಾಗ, "ಅನಗತ್ಯ ಮಾತನಾಡಿ ದಣಿವಾಗುವುದು ಬೇಡ ಎಂದು ಮನವಿ ಮಾಡುತ್ತೇನೆ" ಎಂದು ತಿಳಿಸಿದರು.

ವರದಿ ಬಳಿಕ ದಿನಾಂಕ ನಿಗದಿ:

ರಾಹುಲ್ ಗಾಂಧಿ ಅವರು ಇದೇ ತಿಂಗಳು 20ರಂದು ರಾಜ್ಯಕ್ಕೆ ಭೇಟಿ ನೀಡಿ ಕಾಂಗ್ರೆಸ್ ಕಚೇರಿ ಶಂಕುಸ್ಥಾಪನೆ ಮಾಡಲಿದ್ದಾರೆಯೇ ಎಂದು ಕೇಳಿದಾಗ, 'ಇನ್ನೂ ದಿನಾಂಕ ಅಂತಿಮವಾಗಿಲ್ಲ. ನಾನು ಮನವಿ ಸಲ್ಲಿಸಿದ್ದೇನೆ. ಕಚೇರಿ ನಿರ್ಮಾಣ ಜಾಗದ ಕಾಗದ ಪತ್ರ ಸಿದ್ಧವಾಗುತ್ತಿದೆ. ಈ ಕಚೇರಿ ನಿರ್ಮಾಣ ವಿಚಾರದಲ್ಲಿ ಸಚಿವರು, ಸಂಸದರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಯಾರ್ಯಾರು ಆಸಕ್ತಿ ತೋರಿದ್ದಾರೆ, ಯಾರು ತೋರಿಲ್ಲ ಎಂದು ವರದಿ ನೀಡುವಂತೆ ಹೈಕಮಾಂಡ್ ನಾಯಕರು ಕೇಳಿದ್ದಾರೆ. ನಾನು ವರದಿ ಸಿದ್ಧಪಡಿಸುತ್ತಿದ್ದು, ಅದನ್ನು ಕಳುಹಿಸಬೇಕು. ಆನಂತರ ಆವರು ದಿನಾಂಕ ನಿಗದಿ ಮಾಡುತ್ತಾರೆ" ಎಂದು ವಿವರಿಸಿದರು.

ಶ್ರೀರಾಮುಲು ಕೊಟ್ಟ ಹಣವನ್ನೇ ಬಿಹಾರಕ್ಕೆ ನೀಡಿದ್ದೇವೆ:

ಬಿಹಾರ ಚುನಾವಣೆಗೆ ಸಿಎಂ, ಡಿಸಿಎಂ 300 ಕೋಟಿ ರೂ. ಕಪ್ಪ ಕಾಣಿಕೆ ನೀಡಿದ್ದಾರೆ ಎಂಬ ಶ್ರೀರಾಮುಲು ಹೇಳಿಕೆ ಬಗ್ಗೆ ಕೇಳಿದಾಗ, "ಶ್ರೀರಾಮುಲು ಅವರು ಕಾಂಗ್ರೆಸ್ ಪಕ್ಷಕ್ಕೆ ಹಣ ನೀಡಿದ್ದು, ಅದನ್ನೇ ನಾವು ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ" ಎಂದು ಲೇವಡಿ ಮಾಡಿದರು.

ಸಚಿವರು, ಶಾಸಕರ ಅಭಿಪ್ರಾಯ ಪಡೆದು ಅಭ್ಯರ್ಥಿ ಅಂತಿಮ:

ಕೆಪಿಸಿಸಿ ಕಚೇರಿಯಲ್ಲಿ ನಡೆದ ಮೇಲ್ಮನೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಸಭೆ ಬಗ್ಗೆ ಮಾತನಾಡಿ, "ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಪ್ರತಿ ಕ್ಷೇತ್ರದಲ್ಲಿ ಐದಾರು ಮಂದಿ ಟಿಕೆಟ್ ಆಕಾಂಕ್ಷಿಗಳು ಇದ್ದಾರೆ. 8-10 ದಿನಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ. ಮುಂದಿನ ಸಭೆಯಲ್ಲಿ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚೆ ಮಾಡಿ ಅಭಿಪ್ರಾಯ ಪಡೆಯುತ್ತೇವೆ" ಎಂದು ತಿಳಿಸಿದರು<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments