ಸುಪ್ರೀಂಕೋರ್ಟ್ ಆದೇಶ ಪಾಲನೆ ಅನಿವಾರ್ಯ ಆದೇಶ ಉಲ್ಲಂಘನೆ ಸಂವಿಧಾನಾತ್ಮಕವಾಗಿ ಕಷ್ಟದ ಕೆಲಸ. ಸುಪ್ರೀಂಕೋರ್ಟ್ ಆದೇಶವನ್ನು ನಿರ್ಲಕ್ಷಿಸುವುದು ಕಷ್ಟ. ಏಕೆಂದರೆ ಸುಪ್ರೀಂಕೋರ್ಟ್‌ನಲ್ಲಿ ಮುಖ್ಯ ಅರ್ಜಿಯಿದೆ. ಆದ್ದರಿಂದ, ಈಗ ಆದೇಶ ನಿರ್ಲಕ್ಷಿಸುವುದು ಕಷ್ಟದ ಕೆಲಸವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸರ್ವಪಕ್ಷಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂತಹದೇ ಸನ್ನಿವೇಶ ಬಿಜೆಪಿ ಸರಕಾರದ ಅಇವಧಿಯಲ್ಲೂ ಬಂದಿತ್ತು. ರಾಜ್ಯದ ಜಲಾಶಯಗಳ ಬಗ್ಗೆ ಸುಪ್ರೀಂಕೋರ್ಟ್‌ಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಆಕ್ಟೋಬರ್ 18 ರಂದು ಮುಖ್ಯ ಅರ್ಜಿ ವಿಚಾರಣೆಯಿದೆ. ಆದ್ದರಿಂದ ಈಗ ಸುಪ್ರೀಂ ಆದೇಶವನ್ನು ಪಾಲಿಸಬೇಕಾಗುತ್ತದೆ. ಜತೆಗೆ ಕುಡಿಯುವ ನೀರು ಪೂರೈಕೆಗೂ ಸರಕಾರ ಪ್ರಯತ್ನಿಸಲಿದೆ ಎಂದರು.
ಸುಪ್ರೀಂಕೋರ್ಟ್ ಮುಂದೆ ಪರಿಶೀಲನಾ ಅರ್ಜಿಯನ್ನು ಹಾಕುತ್ತೇವೆ. ಮೇಲ್ವಿಚಾರಣಾ ಸಮಿತಿ ಮುಂದೆ ಸರಕಾರ ಹೋಗಲಿದೆ. ಸುಪ್ರೀಂಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಬಿಡಲಾಗುವುದು. ನಮ್ಮ ರಾಜ್ಯದ ರೈತರಿಗೂ ಸಹ ನೀರು ಬಿಡಲು ಪ್ರಯತ್ನಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ