Select Your Language

Notifications

webdunia
webdunia
webdunia
webdunia

ತಮಿಳುನಾಡಿಗೆ ನೀರು ಬಿಡುವುದು ಅನಿವಾರ್ಯ: ಸಿಎಂ ಸಿದ್ದರಾಮಯ್ಯ

ತಮಿಳುನಾಡಿಗೆ ನೀರು ಬಿಡುವುದು ಅನಿವಾರ್ಯ: ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಸೋಮವಾರ, 3 ಅಕ್ಟೋಬರ್ 2016 (14:14 IST)
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಸುಪ್ರೀಂ ಆದೇಶ ಪಾಲಿಸುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 30 ರಂದು ನಡೆದ ವಿಚಾರಣೆಯಲ್ಲಿ ಅಕ್ಟೋಬರ್ 1 ರಿಂದ 6ರವರೆಗೂ ಒಟ್ಟು 36 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಹಾಗೂ ತರಾತುರಿಯಲ್ಲಿ ನಿರ್ವಹಣಾ ಮಂಡಳಿ ರಚನೆಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದ್ದರಿಂದ ಇಂದು ಮತ್ತೆ ವಿಧಾನ ಮಂಡಲ ಅಧಿವೇಶನ ಕರೆಯಲಾಗಿತ್ತು.
 
ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುಪ್ರೀಂ ಆದೇಶ ಪಾಲಿಸುವುದು ಅನಿವಾರ್ಯವಾಗಿದೆ.  ಬಹಳ ಸುಕ್ಷ್ಮವಾಗಿ ಪರಿಸ್ಥಿತಿಯನ್ನು ಎದುರಿಸಬೇಕಾಗಿದೆ. ನಾವು ನಮ್ಮ ರೈತರ ಹಿತ ಕಾಯಬೇಕು. ಕುಡಿಯುವ ನೀರಿನ ಜೊತೆಗೆ ರೈತರ ಬೆಳೆಗೂ ನೀರು ನೀಡಬೇಕು. ಹೀಗಾಗಿ ಕಾನೂನಿಗೆ ಧಕ್ಕೆಯಾಗದಂತೆ ಸರ್ವಾನುಮತದ ನಿರ್ಣಯ ಕೈಗೊಳ್ಳಬೇಕಿದೆ ಎಂದು ಹೇಳಿದರು. 
 
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಕೋರ್ಟ್ ಆದೇಶ ನೀಡಿದೆ. ಆದರೆ, ಕರ್ನಾಟಕ ಸರಕಾರ ಸುಪ್ರೀಂ ಆದೇಶವನ್ನು ಪಾಲಿಸದೇ ನ್ಯಾಯಾಲಯಕ್ಕೆ ಅಗೌರವ ತೋರಿದೆ. ಹೀಗಾಗಿ ತಮಿಳುನಾಡಿಗೆ ನೀರು ಬಿಡಲೇಬೇಕು. ಇಲ್ಲದಿದ್ದರೇ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಸೆ.30 ರಂದು ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಜಯಲಲಿತಾ ದಾಖಲಾಗಿರುವ ಆಸ್ಪತ್ರೆಯ ಮಹಡಿ ವಿಡಿಯೋ ವೈರಲ್