Select Your Language

Notifications

webdunia
webdunia
webdunia
webdunia

ತಮಿಳುನಾಡು ವಿಧಾನಸಭೆಯಲ್ಲಿನ ತೀರ್ಮಾನಕ್ಕೆ ನಾವು ಜವಾಬ್ದಾರಿಯಲ್ಲ - ಹೆಚ್. ಡಿ. ಕೆ

ತಮಿಳುನಾಡು ವಿಧಾನಸಭೆಯಲ್ಲಿನ ತೀರ್ಮಾನಕ್ಕೆ ನಾವು ಜವಾಬ್ದಾರಿಯಲ್ಲ - ಹೆಚ್. ಡಿ. ಕೆ
ಬೆಂಗಳೂರು , ಮಂಗಳವಾರ, 22 ಮಾರ್ಚ್ 2022 (18:10 IST)
ಮೇಕೆದಾಟು ವಿಷಯದಲ್ಲಿ ಸೋಮವಾರದಂದು ತಮಿಳುನಾಡು ವಿಧಾನಸಭೆಯಲ್ಲಿ ಕೈಗೊಂಡ ನಿರ್ಣಯಕ್ಕೂ ಮತ್ತು ರಾಜ್ಯಕ್ಕೂ ಸಂಬಂಧವಿಲ್ಲ. ರಾಜ್ಯ ಸರ್ಕಾರ ಈ ಯೋಜನೆಯಲ್ಲಿ ಇಚ್ಛಾಶಕ್ತಿ ಪ್ರದರ್ಶನ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸಲಹೆ ನೀಡಿದರು.
ವಿಧಾನಸೌಧದ ಬಳಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ವಿಧಾನಸಭೆಯಲ್ಲಿ ತಮಿಳುನಾಡಿನ ಎಲ್ಲಾ ಪಕ್ಷಗಳು ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬಾರದು ಎಂದು ನಿರ್ಣಯ ಕೈಗೊಂಡಿದ್ದಾರೆ. ಅಕ್ಕಪಕ್ಕದ ರಾಜ್ಯಗಳ ಮೇಲೆ, ಹೆಚ್ಚಾಗಿ ಕರ್ನಾಟಕದ ಮೇಲೆ ತಮಿಳುನಾಡು ಸರ್ಕಾರ ಒತ್ತಡ ಹೇರುವಂತದ್ದು ನಿರಂತರವಾಗಿ ನಡೆಯುತ್ತಿದೆ ಎಂದು ಹೇಳಿದರು.
 
ಬೆಂಗಳೂರು ನಗರಕ್ಕೆ ಹೆಚ್ಚುವರಿ ನೀರನ್ನು ಕುಡಿಯುವ ಹಕ್ಕಿದೆ. ಅವರ ನೀರನ್ನು ಕೊಡದಿದ್ದಾಗ ಅವರು ಕೇಳಬೇಕು. ನಮ್ಮ ಭಾಗದಲ್ಲಿ ಜಲಾಶಯ ಕಟ್ಟಲು ತಕರಾರು ಇಲ್ಲ ಎಂದು ತಮಿಳುನಾಡು ವಕೀಲರೇ ಸುಪ್ರೀಂ ಕೋರ್ಟ್ ನಲ್ಲಿ ಹೇಳಿದ್ದಾರೆ. ಈಗ ನೋಡಿದರೆ ಹೊಸ ವರಸೆ ಶುರುವಾಗಿದೆ ಎಂದು ಅವರು ಕಿಡಿಕಾರಿದರು

Share this Story:

Follow Webdunia kannada

ಮುಂದಿನ ಸುದ್ದಿ

ನಮ್ಮ ಮೆಟ್ರೋ ಮೇಲೆ ಕಲ್ಲು ಎಸದ ದುಷ್ಕರ್ಮಿಗಳು ಸಿಸಿಟಿವಿ ಅಳವಡಿಕೆ