Select Your Language

Notifications

webdunia
webdunia
webdunia
webdunia

ಭಯೋತ್ಪಾದಕ ಚಟುವಟಿಕೆ ಮೇಲೆ ನಿಗಾ ವಹಿಸಲು ಸೂಚನೆ: ಅರಗ ಜ್ಞಾನೇಂದ್ರ

ಭಯೋತ್ಪಾದಕ ಚಟುವಟಿಕೆ ಮೇಲೆ ನಿಗಾ ವಹಿಸಲು ಸೂಚನೆ: ಅರಗ ಜ್ಞಾನೇಂದ್ರ
bengaluru , ಶುಕ್ರವಾರ, 20 ಆಗಸ್ಟ್ 2021 (16:29 IST)
ಕರಾವಳಿಯಲ್ಲಿ ಕೆಲ ವರ್ಷ
ಗಳಿಂದ ಭಯೋತ್ಪಾದಕ ಚಟುವಟಿಕೆ ನಡೀತಾ ಇದೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಮಂಗಳೂರಿನಲ್ಲಿ ಎನ್ಐಎ ಕೇಂದ್ರ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿ ಮಂಗಳೂರಲ್ಲಿ ಮಾತನಾಡಿದ ಅವರು, ಈ ಚಟುವಟಿಕೆಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ‌ ನೀಡಿದ್ದೇನೆ. ಕೇಂದ್ರದ ಜೊತೆ ಮಾತನಾಡಿ ಎನ್.ಐ.ಎ ಕಚೇರಿ ಸ್ಥಾಪಿಸುವ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದರು.
ಅಫ್ಘಾನಿಸ್ತಾನದಲ್ಲಿ ಕನ್ನಡಿಗರು ಅತಂತ್ರರಾಗಿದ್ದು ಕೇಂದ್ರ ಸರ್ಕಾರದಿಂದ ಅವರನ್ನು ಕರೆತರುವ ವ್ಯವಸ್ಥೆಯಾಗುತ್ತಿದೆ. ರಾಜ್ಯದಿಂದ ನೋಡಲ್ ಆಫೀಸರ್ ನೇಮಕ ಮಾಡಿದ್ದೇವೆ. ಸಿಐಡಿಯಲ್ಲಿ ಕರ್ತವ್ಯದಲ್ಲಿರುವ ಉಮೇಶ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದ್ದೇವೆ. ಈ ಹಿಂದೆ ವಿದೇಶದಲ್ಲಿ ಅತಂತ್ರರಾಗಿದ್ದ ಕನ್ನಡಿಗರನ್ನು ಕರೆ ತಂದಿದ್ದಾರೆ. ಸಂಕಷ್ಟದಲ್ಲಿರುವವರು ಅವರನ್ನು ಸಂಪರ್ಕ ಮಾಡಬಹುದು ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಖುಷಿಯಾದಾಗ ಗಾಳಿ ಗುಂಡು ಹಾರಿಸೋದು ಸಂಪ್ರದಾಯ: ಗೃಹ ಸಚಿವ ಅರಗ ಜ್ಞಾನೇಂದ್ರ