Publish Date: Sun, 19 Nov 2023 (17:00 IST)
Updated Date: Sun, 19 Nov 2023 (17:16 IST)
ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ನಾವೆಲ್ಲ ಒಗ್ಗಟ್ಟಿನಿಂದ ಹೋರಾಟ ಮಾಡಬೇಕು ಎಂದು ಬಿಜೆಪಿಯ ಶಾಸಕಾಂಗ ಪಕ್ಷದ ನೂತನ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಪಕ್ಷದ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ನಾನು ಜೋಡೆತ್ತು ರೀತಿ ರಾಜ್ಯದಲ್ಲಿ ಪ್ರವಾಸ ಕೈಗೊಂಡು ಸಂಘಟನೆ ಬಲಪಡಿಸುತ್ತೇವೆ ಎಂದೂ ಹೇಳಿದ್ದಾರೆ.