Publish Date: Thu, 21 Sep 2017 (20:08 IST)
Updated Date: Thu, 21 Sep 2017 (20:10 IST)
ಜಿಲ್ಲೆಯ ಅಥಣಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೇವೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅಥಣಿ ಕ್ಷೇತ್ರದಿಂದ ಸ್ಪರ್ಧಿಸಿದಲ್ಲಿ ಜಿಲ್ಲೆಯ ಇತರ ವಿಧಾನಸಭಾ ಕ್ಷೇತ್ರಗಳಿಗೂ ನೆರವಾಗುತ್ತದೆ ಎಂದು ತಿಳಿಸಿದ್ದಾರೆ.
ನಮ್ಮ ಸಹೋದರರಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವೆಲ್ಲರು ಒಟ್ಟಾಗಿದ್ದೇವೆ. ಒಟ್ಟಾಗಿ ನಿಮ್ಮ ಮುಂದೆ ಬರುತ್ತೇವೆ ಎಂದರು. ಮುಂಬರುವ ಚುನಾವಣೆಯಲ್ಲಿ ಜಿಲ್ಲೆಯ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷದ ಶಾಸಕನಾಗಿ ಆಯ್ಕೆಯಾದ ನಂತರ ಸಚಿವನಾಗಲು 20 ವರ್ಷಗಳು ಬೇಕಾಯಿತು. ತಾಳ್ಮೆಯಿದ್ದಲ್ಲಿ ಎಲ್ಲವು ತನ್ನಿಂದ ತಾನೇ ಒಲಿಯುತ್ತದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಕಿವಿಮಾತು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.