Publish Date: Sat, 30 May 2026 (20:24 IST)
Updated Date: Sat, 30 May 2026 (20:29 IST)
ಬೆಂಗಳೂರು: ಕರ್ನಾಟಕದ ಅಭಿವೃದ್ಧಿಗಾಗಿ, ಕರ್ನಾಟಕದ ಜನರ ಕಲ್ಯಾಣಕ್ಕಾಗಿ, ಶಾಂತಿ, ಪ್ರಗತಿ ಮತ್ತು ಸಹೋದರತ್ವಕ್ಕಾಗಿ, ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಹೇಳಿದರು.
ನೂತನವಾಗಿ ಆಯ್ಕೆಯಾದ ಡಿಸಿಎಂ ಡಿಕೆ ಶಿವಕುಮಾರ್‌ಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಏಕಮತದಿಂದ ಆಯ್ಕೆಯಾದ ನಾಯಕರಿಗೂ ಹಾಗೂ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಿಯುಕ್ತರಾದ ಡಿ.ಕೆ.ಶಿವಕುಮಾರ್ ಅವರಿಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಹೋರಾಟವೇ ಜೀವನವಾಗಿಸಿಕೊಂಡಿರುವ ಅವರು, ಕಾಂಗ್ರೆಸ್ ಸಿದ್ಧಾಂತಗಳನ್ನು ರಕ್ತದಲ್ಲಿ ಬೆರೆಸಿಕೊಂಡ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರು; ಅಪರೂಪದ ಸಂಘಟನಾ ಸಾಮರ್ಥ್ಯ ಹೊಂದಿದ ನಾಯಕರು. ಅದಕ್ಕಿಂತಲೂ ಮುಖ್ಯವಾಗಿ, ಏಳು ಕೋಟಿ ಕನ್ನಡಿಗರ ಮೇಲಿನ ಅಪಾರ ಪ್ರೀತಿ, ಕಾಳಜಿ ಮತ್ತು ಕರುಣೆಯನ್ನು ಹೃದಯದಲ್ಲಿ ಹೊತ್ತಿರುವ ಅವರು, ಕರ್ನಾಟಕವನ್ನು ಸಮಗ್ರ ಅಭಿವೃದ್ಧಿ ಮತ್ತು ವೈಭವದ ಹೊಸ ಎತ್ತರಗಳಿಗೆ ಕೊಂಡೊಯ್ಯುವ ಮಹತ್ವಾಕಾಂಕ್ಷಿ ಕನಸನ್ನು ಹೊಂದಿದ್ದಾರೆ. ಅವರ ಎಲ್ಲಾ ಪ್ರಯತ್ನಗಳು ಯಶಸ್ವಿಯಾಗಲಿ ಎಂದು ಡಿಕೆ ಶಿವಕುಮಾರ್‌ಗೆ ಹಾರೈಸಿದರು.
ಇನ್ನೂ ಹಂಗಾಮಿ ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಹಾಗೂ ಕಾಂಗ್ರೆಸ್ ಪಕ್ಷಕ್ಕಾಗಿ ಸಲ್ಲಿಸಿದ ಅಮೂಲ್ಯ ಸೇವೆಗೆ ಹೃತ್ಪೂರ್ವಕ ಧನ್ಯವಾದಗಳು.
ಕರ್ನಾಟಕದ ಕಾಂಗ್ರೆಸ್ ಮುಖ್ಯಮಂತ್ರಿಯಾಗಿ ಅವರು ನಿರ್ವಹಿಸಿದ ಎಂಟು ವರ್ಷಗಳ ಅವಧಿ, ದೂರದೃಷ್ಟಿಯ ನಾಯಕತ್ವ, ಸಾಮಾಜಿಕ ನ್ಯಾಯದತ್ತ ಅಚಲ ಬದ್ಧತೆ ಹಾಗೂ ಜನಕಲ್ಯಾಣ ಮತ್ತು ಅಭಿವೃದ್ಧಿಯನ್ನು ಸಮಾನವಾಗಿ ಮುನ್ನಡೆಸಿದ ಸುವರ್ಣಯುಗವಾಗಿ ಸದಾ ನೆನಪಿನಲ್ಲಿ ಉಳಿಯಲಿದೆ.
ವೈಯಕ್ತಿಕವಾಗಿ ಅವರೊಂದಿಗೆ ಕೆಲಸ ಮಾಡುವ, ಅವರ ಅನುಭವ ಮತ್ತು ನಾಯಕತ್ವದಿಂದ ಕಲಿಯುವ ಹಾಗೂ ಕಾಂಗ್ರೆಸ್‌ನ ಅಭಿವೃದ್ಧಿಯೊಂದಿಗೆ ಕಲ್ಯಾಣ ಎಂಬ ತತ್ವವನ್ನು ಸರ್ಕಾರದ ನೀತಿಗಳಾಗಿ ರೂಪಿಸುವ ಅವಕಾಶ ನನಗೆ ದೊರೆತಿದ್ದು ಮಹತ್ತರ ಗೌರವವಾಗಿದೆ. ವಿಶೇಷವಾಗಿ, ಕಾಂಗ್ರೆಸ್‌ನ ಐದು ಗ್ಯಾರಂಟಿಗಳನ್ನು ಜನರ ಬದುಕು ಬದಲಿಸಿದ ಪರಿಣಾಮಕಾರಿ ಕಾರ್ಯಕ್ರಮಗಳಾಗಿ ಜಾರಿಗೊಳಿಸಿದ ಪಯಣ ಎಂದೆಂದಿಗೂ ಸ್ಮರಣೀಯವಾಗಿರುತ್ತದೆ.
ನಮ್ಮ ಶಾಸಕರು, ಸಚಿವರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ಪದಾಧಿಕಾರಿಗಳು ಹಾಗೂ ಲಕ್ಷಾಂತರ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುವ ಮೂಲಕ ಕರ್ನಾಟಕದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷವೇ ಏಕೈಕ ಭರವಸೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಅವರೆಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಕೃತಜ್ಞತೆಗಳು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ