Webdunia - Bharat's app for daily news and videos

Install App

ಸಿದ್ಧಾಂತ ಒಪ್ಪಿ ಬರುವವರನ್ನ ನಾವು ಸ್ವಾಗತ ಮಾಡುತ್ತೇವೆ : ಜಿ.ಪರಮೇಶ್ವರ್

Webdunia
ಶನಿವಾರ, 19 ಆಗಸ್ಟ್ 2023 (11:19 IST)
ಬೆಳಗಾವಿ : ನಾವು ಯಾರಿಗೂ ಬರಬೇಡಿ ಅಂತ ಹೇಳಿಲ್ಲ. ನಮ್ಮ ಸಿದ್ಧಾಂತ ಒಪ್ಪಿ ಬರೋದಾದರೆ ಬರಲಿ, ಅವರನ್ನ ನಾವು ಸ್ವಾಗತ ಮಾಡುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರು ಯಾರು ಬರುತ್ತಾರೆ ಅಂತ ನನಗೆ ಗೊತ್ತಿಲ್ಲ. ಆದರೆ ಬರ್ತಾರೆ ಎನ್ನುವ ಮಾತಿದೆ. ಬರುವವರನ್ನ ನಾವು ಕರೆದುಕೊಳ್ಳುತ್ತೇವೆ ಎಂದರು.
135 ಶಾಸಕರಿದ್ದರೂ ಬೇರೆ ಶಾಸಕರ ಅವಶ್ಯಕತೆ ಇದೆಯಾ ಎಂಬ ಮಾಧ್ಯಮಗಳ ಪ್ರಶ್ನೆಗೆ, ಅವಶ್ಯಕತೆ ಪ್ರಶ್ನೆ ಇಲ್ಲ. ಅವರು ನಮ್ಮ ಕಾಂಗ್ರೆಸ್ ಪಕ್ಷದ ನಾಯಕತ್ವ, ಸಿದ್ದಾಂತ ಒಪ್ಪುವುದಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬರಬೇಕಾಗುತ್ತದೆ ಎಂದು ತಿಳಿಸಿದರು.

ಕಿರುಕುಳ ಕೊಡ್ತಿದ್ದಾರೆ ಎಂಬ ಶಿವರಾಮ್ ಹೆಬ್ಬಾರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದರ ಬಗ್ಗೆ ನನಗೆ ಮಾಹಿತಿ ಇಲ್ಲ. ನಮ್ಮಲ್ಲಿಂದ ಹೋದ ಕೆಲವರಿಗೆ ಅಸಮಾಧಾನ ಆಗಿದೆ ಎಂಬುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಆದರೆ ಅದು ಸತ್ಯವಾಗಿದ್ದರೆ ಬಿಜೆಪಿ ಬಿಟ್ಟು ಬರಬಹುದು. ಪಕ್ಷ ಬಿಟ್ಟು ಹೋದವರು ನಿಮ್ಮನ್ನ ಸಂಪರ್ಕ ಮಾಡಿದ್ದಾರಾ ಎಂಬ ಪ್ರಶ್ನೆಗೆ, ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ. ಅಧ್ಯಕ್ಷರನ್ನು ಸಂಪರ್ಕ ಮಾಡಿರಬಹುದು ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗರ್ಭಕಂಠದ ಕ್ಯಾನ್ಸರ್​ ತಡೆಯಲು ಹೆಣ್ಣುಮಕ್ಕಳಿಗೆ ಹೆಚ್​ಪಿವಿ ಲಸಿಕೆ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಆರ್ಥಿಕ ಒತ್ತಡ ಶಂಕೆ: ಪದಾರ್ಥ ಸೇವಿಸಿ ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ

ಸಂಪ್ರದಾಯವನ್ನು ಒಪ್ಪಿಕೊಂಡು ಒಂದೇ ಯುವತಿಯನ್ನು ಅಪ್ಪಿಕೊಂಡ ಇಬ್ಬರು ಸಹೋದರರು

ಎರಡು ದಶಕಗಳ ಕಾಲ ಕೋಮಾದಲ್ಲಿದ್ದ ಸೌದಿ ಅರೇಬಿಯಾದ ರಾಜಕುಮಾರ ಸ್ಲೀಪಿಂಗ್ ಪ್ರಿನ್ಸ್ ನಿಧನ

ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆ ನಿರೀಕ್ಷೆ: ದಕ್ಷಿಣ ಕನ್ನಡ, ಉಡುಪಿಯಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಮುಂದಿನ ಸುದ್ದಿ
Show comments