ಉಕ್ರೇನ್ ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿರುವ ಸಿಎಂ, ರಷ್ಯಾ ಮತ್ತು ಉಕ್ರೇನ್ ಯುದ್ಧ ಪ್ರಾರಂಭದ ವೇಳೆ, ಭಾರತದ ವಿದ್ಯಾರ್ಥಿಗಳು ವಿಮಾನ ನಿಲ್ದಾಣಕ್ಕೆ ತಲುಪುತ್ತಿದ್ದರು.
100ಕ್ಕೂ ಹೆಚ್ಚು ವಿದ್ಯಾರ್ಥಿಗಳು 2 ಬಸ್ ನಲ್ಲಿ ಸಿಲುಕಿಕೊಂಡಿದ್ದಾರೆ. ಇವರಲ್ಲಿ 10ಕ್ಕಿಂತ ಹೆಚ್ಚು ಮಂದಿ ಕನ್ನಡಿಗರಿದ್ದು, ಅವರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದೆ ಎಂದರು. ಅಲ್ಲದೆ ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೊಂದಿಗೂ ನಿರಂತರ ಸಂಪರ್ಕದಲ್ಲಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.