ಬೆಳಗಾವಿ : ಮಹಾರಾಷ್ಟ್ರದ ಗಡಿ ಸಮನ್ವಯ ಸಚಿವ ಚಂದ್ರಕಾಂತ್ ಪಾಟೀಲ್ ಮತ್ತೆ ಉದ್ಧಟತನ ಪ್ರದರ್ಶನ ಮಾಡಿದ್ದು, ಡಿಸೆಂಬರ್ 6 ರಂದು ನಾವು ಬೆಳಗಾವಿಗೆ ಹೋಗಿಯೇ ತೀರುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿಗೆ ಸವಾಲು ಹಾಕಿದ್ದಾರೆ.
ಕರ್ನಾಟಕಕ್ಕೆ ಭೇಟಿ ನೀಡದಂತೆ ಸಂದೇಶ ರವಾನಿಸಿದ್ದೇವೆ ಎಂಬ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ವಿಚಾರಕ್ಕೆ ಮುಂಬೈನಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಚಂದ್ರಕಾಂತ್ ಪಾಟೀಲ್, ಡಿಸೆಂಬರ್ 6 ರಂದು ನಾವು ಬೆಳಗಾವಿಗೆ ಹೋಗಿಯೇ ತೀರುತ್ತೇವೆ.
ನನಗೆ ಯಾವುದೇ ಫ್ಯಾಕ್ಸ್ ಆಗಲಿ, ಬೊಮ್ಮಾಯಿಯ ಪತ್ರವಾಗಲಿ ತಲುಪಿಲ್ಲ. ನಾನು ಡಿಸೆಂಬರ್ 3 ರಂದು ಹೋಗಬೇಕಿತ್ತು. ಆದ್ರೆ ಡಿಸೆಂಬರ್ 6 ರಂದು ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಹಣ ದಿನ ಇದೆ.
ಅಂದು ಬೆಳಗಾವಿಯಲ್ಲಿ ಹಲವು ಕಾರ್ಯಕ್ರಮಗಳು ಇರುತ್ತವೆ. ಎಲ್ಲರೂ ಸಹ ನನಗೆ ಡಿ.6ರಂದು ಆಗಮಿಸುವಂತೆ ವಿನಂತಿಸಿದ್ದಾರೆ. ಹೀಗಾಗಿ ನಾನು ಡಿ.6ರಂದು ಬೆಳಗಾವಿಗೆ ಭೇಟಿ ನೀಡುತ್ತೇನೆ ಎಂದು ತಿಳಿಸಿದ್ದಾರೆ.