Webdunia - Bharat's app for daily news and videos

Install App

ಹೈಕಮಾಂಡ್ ಒಪ್ಪಿಗೆ ಪಡೆದ ನಂತ್ರ ಜೆಡಿಎಸ್‌ನೊಂದಿಗೆ ಹೊಂದಾಣಿಕೆ: ಜಿ. ಪರಮೇಶ್ವರ್

Webdunia
ಬುಧವಾರ, 24 ಫೆಬ್ರವರಿ 2016 (14:44 IST)
ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯ ಹೊಣೆಯನ್ನು ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರಿಗೆ ವಹಿಸಲಾಗಿತ್ತು. ಆದಾಗ್ಯೂ, ಸೋಲು ಗೆಲುವನ್ನು ಸಾಮೂಹಿಕ ಹೊಣೆಯ ರೀತಿಯಲ್ಲಿ ಸ್ವೀಕರಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
 
ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಅತಂತ್ರವಾಗಿರುವ ಜಿಲ್ಲೆಗಳಲ್ಲಿ ಹೈಕಮಾಂಡ್ ಒಪ್ಪಿಗೆ ಪಡೆದ ನಂತರ ಜೆಡಿಸ್ ಪಕ್ಷದೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
 
ರಾಜ್ಯದ ಎಂಟು ಜಿಲ್ಲಾ ಪಂಚಾಯತ್ ಕ್ಷೇತ್ರಗಳಲ್ಲಿ ಜೆಡಿಎಸ್ ನಿರ್ಣಾಯಕ ಪಾತ್ರವಹಿಸಲಿರುವುದರಿಂದ ಹೈಕಮಾಂಡ್‌ನ ತಾತ್ವಿಕ ಒಪ್ಪಿಗೆ ಪಡೆದು ಜೆಡಿಎಸ್ ವರಿಷ್ಛ ಎಚ್‌.ಡಿ.ದೇವೇಗೌಡ ಮತ್ತು ಎಚ್‌.ಡಿ.ಕುಮಾರಸ್ವಾಮಿಯವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದರು.
 
ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಹೊತ್ತಿರುವ ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರೊಂದಿಗೂ ಕೂಡಾ ಚರ್ಚೆ ನಡೆಸಿದ ನಂತರ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. 
 
ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆದ ಹಿನ್ನೆಡೆ ಕುರಿತಂತೆ ಪಕ್ಷದ ವೇದಿಕೆಯಲ್ಲಿ ವಿಶ್ಲೇಷಣೆ ನಡೆಸಲಾಗುವುದು. ಪಕ್ಷದ ಸೋಲು ಗೆಲುವಿಗೆ ಪಕ್ಷದ ಎಲ್ಲಾ ಮುಖಂಡರು ಸಾಮೂಹಿಕ ಹೊಣೆಯಾಗಿದ್ದಾರೆ ಎಂದರು. 
 
ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ತ್ವರಿತಗತಿಯಲ್ಲಿ ಯೋಜನೆಗಳ ಅನುಷ್ಠಾನ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಮಗೆಲ್ಲಾ ಸೂಚನೆ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ, ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

Show comments