Publish Date: Sun, 05 Feb 2023 (18:09 IST)
Updated Date: Sun, 05 Feb 2023 (18:11 IST)
ಗೆಲ್ಲುವ ಅಭ್ಯರ್ಥಿಗಳಿಗೆ ಮತ್ತು ಮಹಿಳೆಯರಿಗೆ ಟಿಕೇಟ್ ನೀಡಬೇಕು ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೆಳಿದ್ದಾರೆ. ಟಿಕೆಟ್ ಹಂಚಿಕೆ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು ಈಗಾಗಲೇ ಚುನಾವಣಾ ಸಮಿತಿ ಸಭೆ ಆಗಿದೆ. ಪಾರದರ್ಶಕ ಟಿಕೆಟ್ ಹಂಚಿಕೆ ಮಾಡಬೇಕಿದೆ.ಗೆಲ್ಲುವ ಅಭ್ಯರ್ಥಿಗಳಿಗೆ ಮತ್ತು ಮಹಿಳೆಯರಿಗೆ ಟಿಕೇಟ್ ನೀಡಬೇಕು. ಸರ್ವೆ ಅಭಿಪ್ರಾಯ, ಕಾರ್ಯಕರ್ತರ ಅಭಿಪ್ರಾಯ ಪಡೆದು ಹಂಚಿಕೆ ಮಾಡ್ತೇವೆ. ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ, ಅಸಮಧಾನ ಆಗದ ರೀತಿಯಲ್ಲಿ ಟಿಕೆಟ್ ಹಂಚಿಕೆ ಮಾಡ್ತೇವೆ ಎಂದು ಹೇಳಿದರು