ಮಾದರಿ ಶಾಲೆ ಮಾಡುವುದು ನಮ್ಮ ಗುರಿ - ಸಚಿವ ಬಿ. ಸಿ. ನಾಗೇಶ್

Webdunia
ಬುಧವಾರ, 20 ಜುಲೈ 2022 (18:31 IST)
ಮಾದರಿ ಶಾಲೆ ರೂಪಿಸಬೇಕು ಎನ್ನುವುದು ಸರಕಾರದ ಗುರಿ. ಅದಕ್ಕಾಗಿ ಈಗಿರುವ ಶಾಲೆಗಳ ಸಂಖ್ಯೆಗಳನ್ನು ಕಡಿಮೆ ಮಾಡಲು ಚಿಂತನೆ ನಡೆಸಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ.
 
ಸಂವಾದದಲ್ಲಿ ಮಾತನಾಡಿದ ಅವರು, ಮಾದರಿ ಶಾಲೆ ರೂಪಿಸಬೇಕು ಎನ್ನುವುದು ಸರಕಾರದ ಗುರಿ.
ತರಗತಿಗೊಬ್ಬ ಶಿಕ್ಷಕ ಮತ್ತು ಪ್ರತೀ ವಿಭಾಗಕ್ಕೆ ಶಿಕ್ಷಕರು ಇರಬೇಕು. ತರಗತಿ ಕೊಠಡಿಗಳು ಅಚ್ಚುಕಟ್ಟಾಗಿ ಇರಬೇಕು. ಪ್ರತೀ ಮಗುವಿನ ಬಗ್ಗೆ ಗಮನಹರಿಸಬೇಕು. ಇದು ಇನ್ನೂ "ಟೇಕ್‌ ಆಫ್' ಹಂತದಲ್ಲಿದೆ. ಇಲಾಖೆ ಹೋಬಳಿ ಮಟ್ಟದಲ್ಲಿ ಇದನ್ನು ಪರಿಚಯಿಸಲಿದೆ. ಆದರೆ ಈಗಿರುವ ಶಿಕ್ಷಕರ ಸಂಖ್ಯೆಯಲ್ಲಿ ಇದು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಏಕ ಹಳ್ಳಿ ಗ್ರಾಮ ಪಂಚಾಯತ್‌ಗಳಲ್ಲಿ ಇರುವ ಹಲವು ಶಾಲೆಗಳ ಸಂಖ್ಯೆಯನ್ನು 2 ಅಥವಾ 3ಕ್ಕೆ ಇಳಿಸಲಾಗುವುದು ಎಂದಿದ್ದಾರೆ.
 
ನಮ್ಮಲ್ಲಿ 23 ವಿದ್ಯಾರ್ಥಿಗಳಿಗೊಬ್ಬರಂತೆ ಶಿಕ್ಷಕರಿದ್ದಾರೆ. ಹತ್ತು ಮಕ್ಕಳಿರುವ ಶಾಲೆಗೆ ಒಬ್ಬ ಶಿಕ್ಷಕರನ್ನು ನೀಡುತ್ತೇವೆ. ಒಂದು ವೇಳೆ 11 ಮಕ್ಕಳಿದ್ದರೆ ಅಂತಹ ಶಾಲೆಗೆ ಇಬ್ಬರು ಶಿಕ್ಷಕರನ್ನು ನೀಡಲಾಗುತ್ತದೆ. ಪ್ರತೀ ಐದು ಮಕ್ಕಳಿಗೆ ಒಬ್ಬರಂತೆ ಶಿಕ್ಷಕರು ಇರಬೇಕು ಎಂಬುದು ಗುರಿ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಕ್ಕು ಸಾಕುವುದು ಬೇಡವೆಂದ ಮನೆಯವರು, ಜೀವಕ್ಕೆ ಕುತ್ತು ತಂದುಕೊಂಡ ಎಂಬಿಬಿಎಸ್‌ ವಿದ್ಯಾರ್ಥಿನಿ

ಇಸ್ರೇಲ್ ಮೇಲೆ ಮತ್ತೇ ಇರಾನ್ ದಾಳಿ, 100ಕ್ಕೂ ಅಧಿಕ ಮಂದಿಗೆ ಗಾಯ

ದಾವಣಗೆರೆ ದಕ್ಷಿಣ ಉಪಚುನಾವಣೆ, ಗುದ್ದಾಟದ ನಡುವೆ ಕೊನೆಗೂ ಕಾಂಗ್ರೆಸ್ ಟಿಕೆಟ್ ಘೋಷಣೆ

ವಿಚ್ಛೇಧನ ಕೊಟ್ಟಿದ್ದಕ್ಕೆ ಕೋಪಗೊಂಡ ಪತಿ ಮಾಡಿದ ಹೇಯ ಕೃತ್ಯಕ್ಕೆ ಐವರಿಗೆ ಗಂಭೀರ ಗಾಯ

Karnataka Weather: ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

ಮುಂದಿನ ಸುದ್ದಿ
Show comments