Select Your Language

Notifications

webdunia
webdunia
webdunia
webdunia

ಸಮುದಾಯದ ಬೇಡಿಕೆಗಳನ್ನು ಈಡೇರಿಸುತ್ತೇವೆ : ಸಿಎಂ

ಸಮುದಾಯದ ಬೇಡಿಕೆಗಳನ್ನು ಈಡೇರಿಸುತ್ತೇವೆ : ಸಿಎಂ
ಬೆಂಗಳೂರು , ಸೋಮವಾರ, 30 ಜನವರಿ 2023 (10:01 IST)
ಬೆಂಗಳೂರು : ಕ್ಷತ್ರಿಯ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯಕ್ಕೆ ಒತ್ತಾಯಿಸಿ ಬೆಂಗಳೂರಿನಲ್ಲಿಂದು ಬೃಹತ್ ಕ್ಷತ್ರಿಯ ಸಮಾವೇಶ ನಡೆಯಿತು.

ಸಮಾವೇಶದಲ್ಲಿ ಕ್ಷತ್ರಿಯ ಸಮುದಾಯದ ಎಲ್ಲ 38 ಪಂಗಡಗಳು ಒಟ್ಟಾಗಿ ಬೃಹತ್ ಶಕ್ತಿ ಪ್ರದರ್ಶನ ಮಾಡಿದವು. ನಗರದ ಅರಮನೆ ಮೈದಾನದಲ್ಲಿ ರಾಜ್ಯ ಕ್ಷತ್ರಿಯ ಒಕ್ಕೂಟದ ರಾಜ್ಯಾಧ್ಯಕ್ಷ ಉದಯ್ ಸಿಂಗ್ ನೇತೃತ್ವದಲ್ಲಿ ಕ್ಷತ್ರಿಯ ಸಮುದಾಯದ ಬೃಹತ್ ಸಮಾವೇಶ ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಚಾಲನೆ ಕೊಟ್ಟರು. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಂಸದ ಪಿಸಿ ಮೋಹನ್, ಜೆಡಿಎಸ್ ನಾಯಕ ಬಂಡೆಪ್ಪ ಕಾಶಂಪೂರ್ ಸೇರಿ ಸಮುದಾಯದ ಮಠಾಧೀಶರು, ಪ್ರಮುಖರು ಭಾಗವಹಿಸಿದ್ದರು.

ಸಮಾವೇಶದಲ್ಲಿ ರಾಜಕೀಯ ಪ್ರಾತಿನಿಧ್ಯ ಸಿಗದಿದ್ದರೆ, ಒಗ್ಗಟ್ಟಾಗಿ ಹೋರಾಟದ ಸುಳಿವು ಕೊಡಲಾಯಿತು.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತದ ಮೇಲೆ ನಡೆಸಿದ ವ್ಯವಸ್ಥಿತ ದಾಳಿ!