Webdunia - Bharat's app for daily news and videos

Install App

ಶ್ರೀನಿವಾಸ್ ಪ್ರಸಾದ್ ಬಿಜೆಪಿ ಪಕ್ಷಕ್ಕೆ ಬಂದರೆ ಸ್ವಾಗತ: ಶ್ರೀರಾಮುಲು

Webdunia
ಶುಕ್ರವಾರ, 21 ಅಕ್ಟೋಬರ್ 2016 (20:36 IST)
ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇವೆ ಎಂದು ಸಂಸದ ಶ್ರೀರಾಮುಲು ಹೇಳಿದ್ದಾರೆ.
 
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರನ್ನು ಬಿಜೆಪಿ ಪಕ್ಷಕ್ಕೆ ಕರೆತರಲು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಗೋವಿಂದ್ ಕಾರಜೋಳ ಉತ್ಸಕರಾಗಿದ್ದಾರೆ. ಪ್ರಸಾದ್ ಅವರು ಎಲ್ಲೇ ಇದ್ದರು, ಅವರಿಗೆ ಒಳ್ಳೆಯದಾಗಲಿ ಹೇಳಿದರು.
 
ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರನ್ನು ಪೋನ್ ಮೂಲಕ ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇವೆ. ಅವರು ಬಿಜೆಪಿ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇವೆ ಎಂದರು. 
 
ರಾಜ್ಯ ಸಚಿವ ಸಂಪುಟದಿಂದ ಸ್ಥಾನ ಕಳೆದುಕೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಶ್ರೀನಿವಾಸ್ ಪ್ರಸಾದ್ ಅವರು  ಅ.17 ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
 
ಕಾಂಗ್ರೆಸ್ ಪಕ್ಷ ತೊರೆದ ಮೇಲೆ ಶ್ರೀನಿವಾಸ ಪ್ರಸಾದ್ ಅವರಿಗೆ ಬಿಜೆಪಿ ಹಾಗೂ ಜೆಡಿಎಸ್ ಮಣೆ ಹಾಕುತ್ತಿವೆ. ಆದರೆ, ಪ್ರಸಾದ್ ಅವರು ಯಾವ ಪಕ್ಷಕ್ಕೆ ಸೇರುತ್ತಾರೆ ಎನ್ನುವುದು ಕಾದು ನೋಡಬೇಕಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಭಾರತದ ಭವಿಷ್ಯದ ಬೆಳಕು, ನನ್ನ ಹೆಮ್ಮೆಯ ನಾಯಕ: ಸಿದ್ದರಾಮಯ್ಯ

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಗುಡ್ ನ್ಯೂಸ್

Gold Price today: ಮತ್ತೆ ಏರಿತು ಚಿನ್ನದ ರೇಟು, ಬೆಳ್ಳಿಯಿಂದಲೂ ದಾಖಲೆ

ಹನಿಮೂನ್ ಹಂತಕಿ ಸೋನಂ ರಘುವಂಶಿಯ ಮತ್ತೊಂದು ಸೀಕ್ರೆಟ್ ಬಯಲು

ನಾನೇನು ಮಾಡ್ತೀನಿ ಎಂದು ಯಾರಿಗೂ ಗೊತ್ತಿಲ್ಲ: ಇರಾನ್ ಗೆ ಡೊನಾಲ್ಡ್ ಟ್ರಂಪ್ ವಾರ್ನ್

ಮುಂದಿನ ಸುದ್ದಿ
Show comments