Publish Date: Wed, 03 May 2023 (10:02 IST)
Updated Date: Wed, 03 May 2023 (10:04 IST)
ಹಾಸನ : ವಿಶ್ವಾಸ ಬೆಳೆಸಿ, ವಿಶ್ವಾಸದಿಂದ ನಿಮ್ಮ ಮನಸ್ಸು ಗೆದ್ದು ನಿಮ್ಮನ್ನು ಮತ ಕೇಳುತ್ತೇವೆಯೇ ಹೊರತು ಬಿಹಾರ್ ಅಂತಹ ರಾಜಕಾರಣ ನಾವು ಮಾಡುವುದಿಲ್ಲ ಎಂದು ಪ್ರೀತಂಗೌಡ ವಿರುದ್ಧ ಪರೋಕ್ಷವಾಗಿ ಭವಾನಿ ರೇವಣ್ಣ ಗುಡುಗಿದರು.
ನಾವು ಯಾವಾಗ್ಲೂ ಗೂಂಡಾಗಿರಿ ರಾಜಕಾರಣ ಮಾಡಿದವರಲ್ಲ, ವಿಶ್ವಾಸ ಬೆಳೆಸಿ, ವಿಶ್ವಾಸದಿಂದ ನಿಮ್ಮ ಮನಸ್ಸು ಗೆದ್ದು ನಿಮ್ಮನ್ನು ಮತ ಕೇಳುತ್ತೇವೆ ಎಂದರು.
ನೀವೆಲ್ಲಾ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಸ್ವರೂಪ್ಗೆ ಬೆಂಬಲ ಕೊಡುತ್ತೇನೆ ಎಂದು ಹೇಳಿದ್ದೀರಾ. ಒಬ್ಬೊಬ್ಬರು ನೂರು ವೋಟು ಹಾಕಿಸುವ ಶಕ್ತಿ ಇದೆ ಎಂದುಕೊಳ್ಳುತ್ತೇನೆ. ಜೆಡಿಎಸ್ಗೆ ಬೆಂಬಲ ನೀಡಿದ್ದಕ್ಕೆ ನಾವೆಲ್ಲರೂ ಹಾಗೂ ಜೆಡಿಎಸ್ ಪಕ್ಷದವರೆಲ್ಲ ನಿಮಗೆ ಚಿರಋಣಿ ಆಗಿರುತ್ತೇವೆ. ಅದರ ಜೊತೆ ನಮ್ಮ ಕುಟುಂಬ, ಪ್ರಕಾಶಣ್ಣನ ಕುಟುಂಬ ನಿಮ್ಮ ಜೊತೆಗೆ ಇರುತ್ತದೆ ಎಂದು ತಿಳಿಸಿದರು.