Webdunia - Bharat's app for daily news and videos

Install App

ಐಟಿ ದಾಳಿಯಂತಹ ಗೊಡ್ಡು ಬೆದರಿಕೆಗಳಿಗೆ ಮಣಿಯೋಲ್ಲ: ಸಿಎಂ ಗುಡುಗು

Webdunia
ಬುಧವಾರ, 2 ಆಗಸ್ಟ್ 2017 (13:02 IST)
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮನೆಗಳ ಮೇಲೆ ನಡೆಸಿರುವ ದಾಳಿಯಲ್ಲಿ ಕೇಂದ್ರದ ಕೈವಾಡವಿರುವುದು ಜಗಜ್ಜಾಹಿರವಾಗಿದೆ. ಆದರೆ, ಕೇಂದ್ರದ ಇಂತಹ ಗೊಡ್ಡು ಬೆದರಿಕೆಗಳಿಗೆ ಮಣಿಯೋಲ್ಲ ಎಂದು ಗುಡುಗಿದ್ದಾರೆ.
 
ಹೊರರಾಜ್ಯದ ಐಟಿ ಅಧಿಕಾರಿಗಳು ದಾಳಿ ನಡೆಸುವಾಗಿ ಸ್ಥಳೀಯ ಪೊಲೀಸರ ನೆರವು ಪಡೆಯಬೇಕಾಗುತ್ತದೆ. ಆದರೆ, ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಸಿಆರ್‌ಪಿಎಫ್ ಸಿಬ್ಬಂದಿ ನೆರವು ಪಡೆದು ಕಾನೂನುಬಾಹಿರ ಕೃತ್ಯವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ.
 
ಐಟಿ ದಾಳಿಯಲ್ಲಿ ಪ್ರಧಾನಮಂತ್ರಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೈವಾಡವಿರುವುದು ಕಂಡುಬಂದಿದೆ. ಗುಜರಾತ್ ಕಾಂಗ್ರೆಸ್ ಶಾಸಕರಿಗೆ ಆಶ್ರಯ ಕೊಟ್ಟಿದ್ದಕ್ಕಾಗಿ ಐಟಿ ದಾಳಿ ನಡೆದಿದೆ ಎಂದು ಕಿಡಿಕಾರಿದ್ದಾರೆ.
 
ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಭಾವಿಸಿದ ಕೇಂದ್ರ ಸರಕಾರ ಹತಾಷೆಯಿಂದ ಇಂತಹ ದಾಳಿ ನಡೆಸಿದೆ. ಕೇಂದ್ರ ಸರಕಾರದ ಐಟಿ ದಾಳಿ ಷಡ್ಯಂತ್ರಕ್ಕೆ ಮುಂಬರುವ ಚುನಾವಣೆಯಲ್ಲಿ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments