Select Your Language

Notifications

webdunia
webdunia
webdunia
webdunia

ಮೇಯರ್ ಸ್ಥಾನ ಕೊಡೋಲ್ಲ: ಕುಮಾರಸ್ವಾಮಿಗೆ ಯಡಿಯೂರಪ್ಪ ಟಾಂಗ್

ಮೇಯರ್ ಸ್ಥಾನ ಕೊಡೋಲ್ಲ: ಕುಮಾರಸ್ವಾಮಿಗೆ ಯಡಿಯೂರಪ್ಪ ಟಾಂಗ್
ಬೆಂಗಳೂರು , ಶುಕ್ರವಾರ, 16 ಸೆಪ್ಟಂಬರ್ 2016 (14:08 IST)
ಬಿಬಿಎಂಪಿಯಲ್ಲಿ ಮೇಯರ್ ಹಾಗೂ ಉಪಮೇಯರ್ ಆಯ್ಕೆ ಕುರಿತಂತೆ ಯಾವ ಪಕ್ಷದವರನ್ನು ಭೇಟಿ ಮಾಡಿಲ್ಲ. ಹಾಗೂ ಮೇಯರ್ ಸ್ಥಾನವನ್ನು ಬಿಟ್ಟು ಕೊಡಲು ನಮ್ಮ ಪಕ್ಷ ಸಿದ್ಧವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಟಾಂಗ್ ನೀಡಿದ್ದಾರೆ. 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಸ್ಥಿಕೆ ಸಾದ್ಯವಿಲ್ಲ. ವಿವಾದದಲ್ಲಿ ಪ್ರಧಾನಿ ಮಧ್ಯ ಪ್ರವೇಶಿಸಿಲಿ ಎಂದು ಹೇಳುವುದರಲ್ಲಿ ಅರ್ಥವಿಲ್ಲ. ಕಾವೇರಿ ವಿವಾದ ಕೋರ್ಟ್‌ನಲ್ಲಿರುವುದರಿಂದ ಪ್ರಧಾನಿ ಅವರು ಮಧ್ಯ ಪ್ರವೇಶಿಸುವುದರಿಂದ ಪ್ರಯೋಜನೆಯಾಗುವುದಿಲ್ಲ ಎಂದು ಹೇಳಿದರು. 
 
ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಸ್ಥಿಕೆಗೆ ಅವಕಾಶವಿಲ್ಲ ಎಂದು ರಾಜ್ಯದ ಪರ ವಕೀಲ ಮೋಹನ್ ಕಾತರಕಿ ಅವರೇ ಹೇಳಿದ್ದಾರೆ. ಆದರೂ ಸಹ ಮೋದಿ ಮಧ್ಯಸ್ಥಿಕೆಗಾಗಿ ಒತ್ತಾಯಿಸಲಾಗಿದೆ. ಇದರ ಹಿಂದೆ ರಾಜಕೀಯ ಇದೆ ಎಂದು ಆರೋಪಿಸಿದರು.
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳು ಹೊತ್ತಿ ಉರಿಯುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಮಧ್ಯಸ್ಥಿಕೆ ವಹಿಸಿ ವಿವಾದವನ್ನು ಇತ್ಯರ್ಥ್ಯಗೊಳಿಸಲಿ ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದರು.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಾಜಕಾರಣಿಯಾಗಿ ಭರವಸೆಗಳನ್ನು ಈಡೇರಿಸಿಲ್ಲ: ಅಮಿತಾಬ್ ಬಚ್ಚನ್ ವಿಷಾದ