Select Your Language

Notifications

webdunia
webdunia
webdunia
webdunia

ಕನ್ನಡ ವಿರೋಧಿ ಅಧಿಕಾರಿಗಳನ್ನು ಸಹಿಸೋಲ್ಲ: ಸಿಎಂ ಸಿದ್ದರಾಮಯ್ಯ ಗುಡುಗು

ಕನ್ನಡ ವಿರೋಧಿ ಅಧಿಕಾರಿಗಳನ್ನು ಸಹಿಸೋಲ್ಲ:  ಸಿಎಂ ಸಿದ್ದರಾಮಯ್ಯ ಗುಡುಗು
ಬೆಂಗಳೂರು , ಶುಕ್ರವಾರ, 17 ಮಾರ್ಚ್ 2017 (16:17 IST)
ರಾಜ್ಯದಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವವರು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಯಬೇಕು. ಕನ್ನಡ ವಿರೋಧಿ ಅಧಿಕಾರಿಗಳನ್ನು ಯಾವತ್ತೂ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
 
ನಮ್ಮ ಆಡಳಿತ ಭಾಷೆ ಕನ್ನಡ, ಅದು ಪಾಲನೆ ಆಗಬೇಕು. ಯಾವುದೇ ಅಧಿಕಾರಿ ಹೀಗೆ ಹೇಳುವುದು ಸರಿಯಲ್ಲ. ಅಗತ್ಯವಾದಲ್ಲಿ ಕನ್ನಡ ಭಾಷೆ ವಿರೋಧಿಗಳಿಗೆ ಕಾನೂನು ವ್ಯಾಪ್ತಿಯಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ಗುಡುಗಿದ್ದಾರೆ.
 
ಕನ್ನಡ ಭಾಷೆ ವಿರೋಧಿ ಧೋರಣೆ ಅನುಸರಿಸುತ್ತಿರುವ ಎಐಎಸ್ ಅಧಿಕಾರಿ ಶ್ರೀವತ್ಸಾ ಅವರಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಅವರಿಂದ ವಿವರಣೆ ಪಡೆಯಲಾಗುವುದು ಎಂದು ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
 
ಕೆಲವು ಅಧಿಕಾರಿಗಳು ಮನಬಂದಂತೆ ವರ್ತಿಸುತ್ತಿದ್ದಾರೆ. ಅಂತಹ ಅಧಿಕಾರಿಗಳಿಗೆ ಮುಂಬರುವ ದಿನಗಳಲ್ಲಿ ತಕ್ಕ ಶಾಸ್ತಿ ಮಾಡುತ್ತೇವೆ. ಕನ್ನಡ ಭಾಷೆ ಬಾರದಿದ್ದರೆ ಕಲಿಯಲು ಪ್ರಯತ್ನಿಸಬೇಕು. ಅದನ್ನು ಬಿಟ್ಟು ಕನ್ನಡ ಭಾಷೆ ವಿರೋಧಿ ನೀತಿ ಅನುಸರಿಸಿದ್ರೆ ಸರಕಾರ ಅಗತ್ಯವಾದ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸಚಿವ ಜಯಚಂದ್ರ ಕಿಡಿಕಾರಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಹಣಬಲ, ಜಾತಿಬಲದಿಂದ ಚುನಾವಣೆ ಗೆಲ್ಲುತ್ತೇವೆ ಎನ್ನುವುದು ಕಾಂಗ್ರೆಸ್ ಭ್ರಮೆ: ಯಡಿಯೂರಪ್ಪ