Webdunia - Bharat's app for daily news and videos

Install App

ಕಾಂಗ್ರೆಸ್‌ನ ಹಣಬಲ ಗೆಲ್ಲಲಿದೆಯೋ, ಬಿಜೆಪಿ ಜನಬಲ ಗೆಲ್ಲಲಿದೆಯೋ ನೋಡೋಣ: ಈಶ್ವರಪ್ಪ

Webdunia
ಶನಿವಾರ, 1 ಏಪ್ರಿಲ್ 2017 (17:42 IST)
ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಹಣಬಲ ಗೆಲ್ಲಲಿದೆಯೋ, ಬಿಜೆಪಿ ಜನಬಲ ಗೆಲ್ಲಲಿದೆಯೋ ನೋಡೋಣ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸವಾಲ್ ಹಾಕಿದ್ದಾರೆ.
 
ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದಿಂದ ಗಳಿಸಿದ ಹಣವನ್ನು ಉಪಚುನಾವಣೆಯಲ್ಲಿ ಹರಿಸುತ್ತಿದೆ. ಹಣದಿಂದ ಮತದಾರರನ್ನು ಖರೀದಿಸಲು ಪ್ರಯತ್ನಿಸುತ್ತಿದೆ. ಆದರೆ, ಮತದಾರ ಇಂತಹ ತಂತ್ರಗಳಿಗೆ ಬಲಿಯಾಗುವುದಿಲ್ಲ ಎಂದು ಗುಡುಗಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಮತ್ತು ಅವರ ಸಂಪುಟದ ಸಚಿವರು ಹಣದಿಂದ ಚುನಾವಣೆ ಗೆಲ್ಲಬಹುದು ಎನ್ನುವ ಭ್ರಮೆಯಲ್ಲಿದ್ದಾರೆ. ಉತ್ತರಪ್ರದೇಶ, ಗೋವಾದಲ್ಲಿ ನಡೆದ ಚುನಾವಣೆ ಫಲಿತಾಂಶ ಸಾಕ್ಷಿಯಾಗಿದೆ ಎಂದರು.
 
ರಾಜ್ಯದ ಜನತೆ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದ್ದಾರೆ. ಕಾಂಗ್ರೆಸ್‌ಗೆ ಹಣಬಲವಿದ್ದರೆ ಬಿಜೆಪಿಗೆ ಜನಬೆಂಬಲವಿದೆ. ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸುವುದು ಖಚಿತ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments